ಬೆಂಗಳೂರು: ತಂತ್ರಜ್ಞಾನ ಕ್ಷೇತ್ರದಲ್ಲಿ ಮುಂದಿರುವ ರಾಜ್ಯ ವಲಸಿಗ ಕಾರ್ಮಿಕರಿಗೆ ಸಹಾಯವಾಗುವಂತೆ ಹೊಸ ಪೋರ್ಟಲ್ ಒಂದನ್ನು ಆರಂಭಿಸಿದೆ. ಹೊರ ರಾಜ್ಯಗಳ ವಲಸೆ ಕಾರ್ಮಿಕರಿಗೆ ರಾಜ್ಯದಲ್ಲಿ ಸರಿಯಾದ ಉದ್ಯೋಗವನ್ನು ದೊರಕಿಸಿ ಕೊಡುವ ನಿಟ್ಟಿನಲ್ಲಿ ಉದ್ಯೋಗ ನೋಂದಣಿ ಆರಂಭ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ರಾಜ್ಯ ಸರ್ಕಾರವು ದೇಶ, ವಿದೇಶಗಳಿಂದ ರಾಜ್ಯಕ್ಕೆ ಬರುವ ನೌಕರರಿಗೆ ಸಹಾಯವಾಗುವಂತೆ www.migrant.kar.kaushalkar.com ಪೋರ್ಟಲ್ ಅನ್ನು ಸ್ಥಾಪಿಸಿದೆ. ಇದರಲ್ಲಿ ನೋಂದಾಯಿಸಿಕೊಳ್ಳುವ ಮೂಲಕ ಜನರ ಶಿಕ್ಷಣ ಮತ್ತು ಅನುಭವದ ಆಧಾರದಲ್ಲಿ ಅವರಿಗೆ ಪೂರಕ ಉದ್ಯೋಗವನ್ನು ಸುಲಭವಾಗಿ ಪಡೆದುಕೊಳ್ಳುವಂತೆ ಈ ಪೋರ್ಟಲ್ ಅನ್ನು ಸಿದ್ಧಪಡಿಸಲಾಗಿದೆ. ಹೆಸರು ಮತ್ತು ವಿವರಗಳನ್ನು ನೋಂದಾಯಿಸಿಕೊಳ್ಳುವ ಮೂಲಕ ಅವರು ರಾಜ್ಯದಲ್ಲಿರುವ ಉದ್ಯೋಗಾವಕಾಶಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಬಹುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಎಲ್ಲಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆಯೂ ಇದರಲ್ಲಿ ಉದ್ಯೋಗ ಮಾಹಿತಿ ನೀಡಲಾಗುತ್ತಿದ್ದು, ಲಾಗಿನ್ ಆಗಿ ಸೂಚಿಸಿದ ಕಾಲಂಗಳಲ್ಲಿ ವೈಯಕ್ತಿಕ ವಿವರಗಳನ್ನು ನೀಡುವ ಮೂಲಕ ಉದ್ಯೋಗದ ಮಾಹಿತಿ ಪಡೆದುಕೊಳ್ಳಬಹುದಾಗಿದೆ. ಕರ್ನಾಟಕದ ಕೌಶಲ್ಯ ಅಭಿವೃದ್ಧಿ ನಿಗಮವು, ವಲಸಿಗರ ಅನುಕೂಲಕ್ಕಾಗಿ ಈ ಹೊಸ ಕ್ರಮವನ್ನು ಅನುಷ್ಠಾನ ಮೋಡಿರುವುದಾಗಿಯೂ ಅಧಿಕಾರಿಗಳು ತಿಳಿಸಿದ್ದಾರೆ. ಅವರ ಪರಿಣತಿಗೆ ಅನುಗುಣವಾಗಿ ಸೂಕ್ತ ಉದ್ಯೋಗ ಹುಡುಕಿಕೊಳ್ಳಲು ಈ ಪೋರ್ಟಲ್ ನೆರವಾಗಲಿದೆ ಎಂದೂ ತಿಳಿಸಿದ್ದಾರೆ.
ಇನ್ನು ಕೊರೋನಾ ಸಂಕಷ್ಟದ ಲಾಕ್ಡೌನ್ ಕಾರಣದಿಂದಾಗಿ ರಾಜ್ಯದಲ್ಲಿದ್ದ ಅದೆಷ್ಟೋ ಮಂದಿ ವಲಸೆ ಕಾರ್ಮಿಕರು ಬಸ್ಸು, ರೈಲುಗಳ ಮೂಲಕ ಅವರವರ ಊರಿಗೆ ತೆರಳಿದ್ದಾರೆ. ಈ ಹಿನ್ನೆಲೆಯಲ್ಲಿ ಮತ್ತೆ ಅವರಿಗೆ ನೆರವಾಗುವ ಉದ್ದೇಶದಿಂದ ಈ ಅವಕಾಶದ ಸಾಧ್ಯತೆಯನ್ನು ಆರಂಭಿಸಿರುವುದಾಗಿ ಅವರು ತಿಳಿಸಿದ್ದಾರೆ. ಲಾಕ್ಡೌನ್ ನಂತರದಲ್ಲಿ ಸದ್ಯ ಅನೇಕ ಕ್ಷೇತ್ರಗಳಲ್ಲಿ ಉದ್ಯೋಗ ತೆರವಾಗಿದೆ. ಈ ಪೋರ್ಟಲ್ನಿಂದ ಕಂಪನಿಗಳಿಗೂ ಉದ್ಯೋಗಿಗಳನ್ನು ಹುಡುಕಿಕೊಳ್ಳಲು ನೆರವಾಗಲಿದೆ. ಅಲ್ಲದೆ ಎಲ್ಲಾ ನಿಯಂತ್ರಣ ಕ್ರಮಗಳ ಮೂಲಕವೇ ರಾಜ್ಯದಲ್ಲಿ ಉದ್ಯೋಗಕ್ಕೆ ಅವಕಾಶ ನೀಡುವುದಾಗಿಯೂ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇನ್ನು ಈ ತಂತ್ರಜ್ಞಾನ ಡಿಸಿಎಂ ಅಶ್ವತ್ಥ ನಾರಾಯಣ ಅವರ ಕನಸಿನ ಕೂಸಾಗಿದ್ದು, ಮುಂದಿನ ದಿನಗಳಲ್ಲಿ ಉದ್ಯೋಗ ಅರಸುವವರಿಗೂ, ಉದ್ಯೋಗದಾತರಿಗೆ ನೆರವಾಗಲಿರುವುದಾಗಿಯೂ ಅಧಿಕಾರಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.