ಶ್ರೀನಗರ: ಇಂದು ಬೆಳಗ್ಗೆ ಜಮ್ಮು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯ ಸಂದರ್ಭ ಗುಂಡಿನ ದಾಳಿಯಲ್ಲಿ ಮೂವರು ಉಗ್ರರ ಸಂಹಾರವಾಗಿದೆ.
ಶೋಪಿಯಾನ್ನ ಪಿಂಜೋರಾ ಪ್ರದೇಶದಲ್ಲಿ ಉಗ್ರಗಾಮಿಗಳು ಅವಿತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿದ್ದವು. ಈ ಸಂದರ್ಭದಲ್ಲಿ ಭದ್ರತಾ ಪಡೆಗಳ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಯೋಧರು ಪ್ರತಿದಾಳಿ ನಡೆಸಿ ವೇಳೆ ಮೂವರು ಉಗ್ರರನ್ನು ಎನ್ಕೌಂಟರ್ ಮಾಡಿದ್ದಾರೆ.
ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಮಾಹಿತಿ ನೀಡಿದ್ದು, ಗುಂಡಿನ ಚಕಮಕಿ ನಡೆದಿದ್ದಾಗಿ ತಿಳಿಸಿದ್ದಾರೆ. ವಧಿಸಲ್ಪಟ್ಟ ಉಗ್ರರ ಮಾಹಿತಿಯನ್ನು ಅಧಿಕಾರಿಗಳು ಬಹಿರಂಗ ಪಡಿಸಿಲ್ಲ. ಕಳೆದ 24 ಗಂಟೆಗಳಲ್ಲಿ ಈ ಪ್ರದೇಶದಲ್ಲಿ ಎರಡು ಎನ್ಕೌಂಟರ್ಗಳು ನಡೆದಿರುವುದಾಗಿಯೂ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಭಾನುವಾರ ನಡೆಸಿದ್ದ ಕಾರ್ಯಾಚರಣೆಯಲ್ಲಿ ಐವರು ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಉಗ್ರರನ್ನು ಭದ್ರತಾ ಸಿಬ್ಬಂದಿ ವಧಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.