ನವದೆಹಲಿ: ಪೂರ್ವ ಲಡಾಖ್ನಲ್ಲಿ ಚೀನಾ ಜೊತೆಗಿನ ನಿರಂತರ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸೋಮವಾರ ರಕ್ಷಣಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಮತ್ತು ಮೂರು ಸೇನಾ ಮುಖ್ಯಸ್ಥರನ್ನು ಭೇಟಿಯಾಗಿ, ಲಡಾಖ್ ಗಡಿ ನಿಯಂತ್ರಣ ಪ್ರದೇಶದ ಭದ್ರತೆಯ ಬಗ್ಗೆ ಪರಿಶೀಲಿಸಿದರು.
ರಾಷ್ಟ್ರ ರಾಜಧಾನಿಯ ಸಚಿವರ ಅಧಿಕೃತ ನಿವಾಸದಲ್ಲಿ ಸಭೆ ನಡೆಯಿತು.
ಚೀನಾದ ಮೊಲ್ಡೊದಲ್ಲಿ ಶನಿವಾರ ಉಭಯ ತಂಡಗಳ ನಡುವೆ ಉನ್ನತ ಮಟ್ಟದ ಮಿಲಿಟರಿ ಮಾತುಕತೆ ನಡೆದ ಎರಡು ದಿನಗಳ ನಂತರ ಈ ಸಭೆ ನಡೆದಿದೆ. ಎಲ್ಎಸಿಗೆ ನೇರವಾಗಿ ಜವಾಬ್ದಾರವಾಗಿರುವ ಘಟಕವಾದ 14 ಕಾರ್ಪ್ಸ್ ಕಮಾಂಡರ್ ಲೆಫ್ಟಿನೆಂಟ್ ಜನರಲ್ ಹರಿಂದರ್ ಸಿಂಗ್ ಅವರು ಭಾರತದ ತಂಡವನ್ನು ಪ್ರತಿನಿಧಿಸಿದರೆ, ಚೀನಿಯರನ್ನು ದಕ್ಷಿಣ ಕ್ಸಿನ್ಜಿಯಾಂಗ್ ಮಿಲಿಟರಿ ಪ್ರದೇಶದ ಕಮಾಂಡರ್ ಮೇಜರ್ ಜನರಲ್ ಲಿಯು ಲಿನ್ ಪ್ರತಿನಿಧಿಸಿದ್ದಾರೆ.
ಪ್ರಸ್ತುತ ನಡೆಯುತ್ತಿರುವ ವಿವಾದವನ್ನು ಶಾಂತಿಯುತವಾಗಿ ಬಗೆಹರಿಸಲು ಉಭಯ ಕಡೆಯವರು ಒಪ್ಪಿಗೆ ಸೂಚಿಸಿದ್ದಾರೆ ಮತ್ತು ಇದರಿಂದಾಗಿ ಮಿಲಿಟರಿ ಮತ್ತು ರಾಜತಾಂತ್ರಿಕ ಕಾರ್ಯಗಳನ್ನು ಮುಂದುವರಿಸಲಾಗುವುದು ಎಂದು ಜೂನ್ 7 ರಂದು ವಿದೇಶಾಂಗ ಸಚಿವಾಲಯ ಹೇಳಿದೆ.
ಗಮನಾರ್ಹವಾಗಿ, ಎರಡೂ ರಾಷ್ಟ್ರಗಳು ಈಗಾಗಲೇ ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮಧ್ಯಸ್ಥಿಕೆ ವಹಿಸುವ ಪ್ರಸ್ತಾಪವನ್ನು ತಿರಸ್ಕರಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.