ನವದೆಹಲಿ: ಚೀನಾದ ಸರಕುಗಳನ್ನು ಬಹಿಷ್ಕರಿಸಲು ಜೂನ್ 10 ರಿಂದ ರಾಷ್ಟ್ರವ್ಯಾಪಿ ಅಭಿಯಾನವನ್ನು ಪ್ರಾರಂಭಿಸುವುದಾಗಿ ಕಾನ್ಫೆಡರೇಶನ್ ಆಫ್ ಆಲ್ ಇಂಡಿಯಾ ಟ್ರೇಡರ್ಸ್ (ಸಿಎಐಟಿ) ಪ್ರಕಟಿಸಿದೆ ಎಂದು ವರದಿಗಳು ತಿಳಿಸಿವೆ.
7 ಕೋಟಿ ವ್ಯಾಪಾರಿಗಳನ್ನು ಪ್ರತಿನಿಧಿಸುವ ಸಿಎಐಟಿ, ಚೀನಾದ ಉತ್ಪನ್ನಗಳನ್ನು ಮಾರಾಟ ಮಾಡದಂತೆ ಅಂಗಡಿಯವರನ್ನು ಕೇಳಿಕೊಳ್ಳುವುದರ ಜೊತೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಸ್ಥಳೀಯತೆಯ ಮನವಿಯ ಅಂಗವಾಗಿ ಮೇಡ್-ಇನ್-ಇಂಡಿಯಾ ಉತ್ಪನ್ನಗಳನ್ನು ಖರೀದಿಸಲು ಗ್ರಾಹಕರನ್ನು ಒತ್ತಾಯಿಸಲಿದೆ ಎನ್ನಲಾಗಿದೆ.
“ಚೀನಾದಿಂದ ಆಮದು 2017-18ರ ಇದ್ದ 76 ಬಿಲಿಯನ್ನಿಂದ ಪ್ರಸ್ತುತ 70 ಬಿಲಿಯನ್ಗೆ ಇಳಿದಿದೆ. ಈ 6 ಬಿಲಿಯನ್ ಆಮದು ಕುಸಿತವು ಸ್ಥಳೀಯ ಸರಕುಗಳ ಬಳಕೆ ಮತ್ತು ಗ್ರಾಹಕರ ಭಾವನೆಗಳನ್ನು ಬದಲಿಸುವ ನೈಜ ಕಥೆಯನ್ನು ಹೇಳುತ್ತದೆ” ಎಂದು ಸಿಎಐಟಿ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಖಂಡೇಲ್ವಾಲ್ ಹೇಳಿದ್ದಾರೆ.
2021ರ ಡಿಸೆಂಬರ್ನಲ್ಲಿ ಚೀನಾದ ಸರಕುಗಳ ಮೇಲಿನ ಅವಲಂಬನೆಯನ್ನು 13 ಬಿಲಿಯನ್ಗೆ ಇಳಿಸಲು ಸಿಎಐಟಿ ಪ್ರಯತ್ನಿಸುತ್ತಿದೆ ಎಂದು ಅವರು ಹೇಳಿದರು. ಇದನ್ನು ಸಾಧಿಸಲು, ಸಿಎಐಟಿ 3,000 ಚೀನೀ ಸರಕುಗಳ ಪಟ್ಟಿಯನ್ನು ಸಿದ್ಧಪಡಿಸಿದೆ ಎಂದು ಹೇಳಿದ ಅವರು, ಈ ಸರಕುಗಳಿಗೆ ಸ್ಥಳೀಯ ಪರ್ಯಾಯಗಳು ಮಾರುಕಟ್ಟೆಗಳಲ್ಲಿ ಸುಲಭವಾಗಿ ಲಭ್ಯವಿದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.