ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಸುಗೂ ಪ್ರದೇಶದಲ್ಲಿ ಬುಧವಾರ ಭದ್ರತಾ ಪಡೆ ಮತ್ತು ಭಯೋತ್ಪಾದಕರ ನಡುವೆ ನಡೆದ ಘರ್ಷಣೆಯಲ್ಲಿ ಕನಿಷ್ಠ ಇಬ್ಬರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ. ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಜಂಟಿ ತಂಡ, 44 ಆರ್ಆರ್ ಮತ್ತು ಸಿಆರ್ಪಿಎಫ್ ಪ್ರಾರಂಭಿಸಿದ ಕಾರ್ಯಾಚರಣೆ ಇನ್ನೂ ಮುಂದುವರೆದಿದೆ. ಹತ್ಯೆಗೀಡಾದ ಭಯೋತ್ಪಾದಕರ ಗುರುತು ಇನ್ನೂ ತಿಳಿದುಬಂದಿಲ್ಲ ಎಂದು ವರದಿಗಳು ತಿಳಿಸಿವೆ.
2-3 ಭಯೋತ್ಪಾದಕರು ಈ ಪ್ರದೇಶದಲ್ಲಿ ಅಡಗಿದ್ದಾರೆ ಎಂದು ಮಾಹಿತಿ ಪಡೆದ ನಂತರ ಈ ಕಾರ್ಯಾಚರಣೆಯನ್ನು ಭದ್ರತಾ ಪಡೆಗಳು ಪ್ರಾರಂಭಿಸಿದವು. ಕೆಲವು ಭಯೋತ್ಪಾದಕರು ಅಲ್ಲಿ ಅಡಗಿದ್ದಾರೆ ಎಂದು ವಿಶ್ವಾಸಾರ್ಹ ಮಾಹಿತಿಗಳನ್ನು ಪಡೆದ ನಂತರ ಭದ್ರತಾ ಪಡೆಗಳು ಸೇಬಿನ ತೋಟವೊಂದನ್ನು ಸುತ್ತುವರಿದು ಕಾರ್ಯಾಚರಣೆ ನಡೆಸಿದವು, ನಂತರ ಎನ್ಕೌಂಟರ್ ಪ್ರಾರಂಭವಾಯಿತು. ಭದ್ರತಾ ಪಡೆಗಳು ಸ್ಥಳಕ್ಕೆ ಬಂದ ಬಳಿಕ ಭಯೋತ್ಪಾದಕರು ಗುಂಡು ಹಾರಿಸಲು ಪ್ರಾರಂಭಿಸಿದರು. ಇದರ ವಿರುದ್ಧ ಭದ್ರತಾ ಸಿಬ್ಬಂದಿಗಳು ಪ್ರತೀಕಾರವನ್ನು ತೀರಿಸಿಕೊಳ್ಳಲು ಎನ್ಕೌಂಟರ್ಗೆ ಪ್ರಾರಂಭಿಸಿದವು.
ಕಳೆದ ಒಂದು ವಾರದಲ್ಲಿ ಶೋಪಿಯಾನ್ ಜಿಲ್ಲೆಯಲ್ಲಿ ನಡೆದ ಮೂರನೇ ಎನ್ಕೌಂಟರ್ ಇದಾಗಿದೆ. ಜಿಲ್ಲೆಯಲ್ಲಿ ಕಳೆದ ಎರಡು ಎನ್ಕೌಂಟರ್ಗಳಲ್ಲಿ ಒಂಬತ್ತು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಮತ್ತು ಎಲ್ಲರೂ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಗೆ ಸೇರಿದವರು ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.