ನವದೆಹಲಿ: ತಮ್ಮ ಸಾಮರ್ಥ್ಯ ನಿರ್ಮಾಣಕ್ಕಾಗಿ ಖಾಸಗಿ ವಲಯಗಳು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)ದ ಸೌಲಭ್ಯಗಳು ಮತ್ತು ಇತರ ಸಂಬಂಧಿತ ಸ್ವತ್ತುಗಳನ್ನು ಬಳಕೆ ಮಾಡಿಕೊಳ್ಳಬಹುದಾಗಿದೆ ಎಂದು ಕೇಂದ್ರ ಪರಮಾಣು ಇಂಧನ ಇಲಾಖೆಯ ಸಚಿವ ಡಾ.ಜಿತೇಂದ್ರ ಸಿಂಗ್ ಮಂಗಳವಾರ ಹೇಳಿದ್ದಾರೆ.
ಇಸ್ರೋದ ಎಲ್ಲಾ ಸೌಲಭ್ಯಗಳನ್ನು ಖಾಸಗಿಯವರೂ ಉಪಯೋಗಿಸುವುದಕ್ಕೆ ಪೂರಕವಾಗುವಂತೆ ಬೇಕಾದ ವ್ಯವಸ್ಥೆಗಳನ್ನು ಶೀಘ್ರವೇ ಮಾಡಲಾಗುವುದಾಗಿಯೂ ಅವರು ಭರವಸೆ ನೀಡಿದ್ದಾರೆ. ಕೋವಿಡ್-19 ಹಿನ್ನಲೆಯಲ್ಲಿ ಹದಗೆಟ್ಟ ಆರ್ಥಿಕತೆಯನ್ನು ಮೇಲೆತ್ತಲು ಘೋಷಿಸಲಾದ ಆತ್ಮನಿರ್ಭರ ಭಾರತಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ತೆಗೆದುಕೊಂಡ ನಿರ್ಣಯದಂತೆ ಬಾಹ್ಯಾಕಾಶ ಕ್ಷೇತ್ರದಲ್ಲಿಯೂ ಖಾಸಗಿ ವಲಯಕ್ಕೆ ಅವಕಾಶ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಈ ಮಹತ್ತರ ಬದಲಾವಣೆಯನ್ನು ಮಾಡುವುದಾಗಿ ಅವರು ಮಾಹಿತಿ ನೀಡಿದ್ದಾರೆ ಎಂದು ವರದಿಯಾಗಿದೆ.
ಖಾಸಗಿ ಕ್ಷೇತ್ರಕ್ಕೆ ಮುಂದಿನ ದಿನಗಳಲ್ಲಿ ಇಸ್ರೋದ ಸೇವೆ ತೆರೆದುಕೊಳ್ಳುವುದರ ಮತ್ತು ಅವರಿಗೆ ಬೇಕಾದ ಸೌಲಭ್ಯಗಳನ್ನು ಒದಗಿಸುವುದರ ಜೊತೆಗೆ, ಅವರ ಸಾಮರ್ಥ್ಯ ವೃದ್ಧಿಗೆ ಬೇಕಾದ ಜ್ಞಾನ, ಅವಶ್ಯಕತೆಗಳನ್ನು ನೀಡುವುದಕ್ಕೆ ಬೇಕಾದ ಕಾರ್ಯಯೋಜನೆಗಳನ್ನು ಹಾಕಿಕೊಳ್ಳಲಾಗುವುದು ಎಂದೂ ಅವರು ತಿಳಿಸಿದ್ದಾರೆ.
ಭಾರತವನ್ನು ಸ್ವಾವಲಂಬಿಯನ್ನಾಗಿಸುವ ನಿಟ್ಟಿನಲ್ಲಿ ಖಾಸಗಿ ಕ್ಷೇತ್ರದವರಿಗೂ ಇಸ್ರೋದ ಸೌಲಭ್ಯಗಳನ್ನು ಬಳಸುವ ಅವಕಾಶ ನೀಡಲಾಗುತ್ತಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ. ಆ ಮೂಲಕ ಖಾಸಗಿಯವರಿಂದಲೂ ಬಾಹ್ಯಾಕಾಶ ಸಂಬಂಧಿ ಹೊಸ ಹೊಸ ಅನ್ವೇಷಣೆಗಳು, ಹೊಸ ಸಂಶೋಧನೆಗಳಿಗೆ ಭಾರತ ತೆರೆದುಕೊಳ್ಳುವ ಮೂಲಕ ಹೆಸರು ಮಾಡಲಿದೆ ಎಂಬುದಾಗಿಯೂ ಅವರು ಭರವಸೆ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.