ಬೆಂಗಳೂರು: ರಾಜ್ಯದಲ್ಲಿ ಅದೆಷ್ಟೋ ಜನರು ಕೊರೋನಾದಿಂದ ಸಂಕಷ್ಟವನ್ನು ಎದುರಿಸುವಂತಾಗಿದೆ. ಇಂತಹ ಸಂದರ್ಭದಲ್ಲಿ ಅಟೋರಿಕ್ಷಾ ಮತ್ತು ಟ್ಯಾಕ್ಸಿ ಚಾಲಕರಿಗೆ ತಲಾ 5000 ರೂ. ಗಳಂತೆ ಪರಿಹಾರ ಧನ ನೀಡುವುದಾಗಿ ರಾಜ್ಯ ಸರ್ಕಾರ ಘೋಷಿಸಿತ್ತು. ಅದರಂತೆ ಇದೀಗ 40 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ.
ಕೊರೋನಾದಿಂದಾಗಿ ಆಟೋ ಮತ್ತು ಟ್ಯಾಕ್ಸಿ ಚಾಲಕರು ಕೆಲಸವಿಲ್ಲದೆ ಪರದಾಡುವಂತಾಗಿದೆ. ಜೊತೆಗೆ ಕುಟುಂಬ ನಿರ್ವಹಣೆಗೂ ಸಂಕಷ್ಟ ಅನುಭವಿಸುವಂತಾಗಿದೆ. ಅಂತಹವರನ್ನು ಸಂಕಷ್ಟದಿಂದ ಪಾರು ಮಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಈ ಮಹತ್ವದ ನಿರ್ಧಾರವನ್ನು ಪ್ರಕಟಿಸಿತ್ತು. ಅದರಂತೆ ಇದೀಗ 40 ಕೋಟಿ ರೂ. ಗಳನ್ನು ಬಿಡುಗಡೆ ಮಾಡಿರುವುದಾಗಿ ತಿಳಿಸಿದೆ.
ಈ ಪರಿಹಾರ ಧನಕ್ಕಾಗಿ ಒಂದು ಲಕ್ಷದಷ್ಟು ಚಾಲಕರು ಈಗಾಗಲೇ ನೋಂದಾಯಿಸಿಕೊಂಡಿದ್ದಾರೆ. ಇನ್ನೂ ಆರು ಲಕ್ಷಕ್ಕೂ ಅಧಿಕ ಜನರು ನೋಂದಾಯಿಸಿಕೊಳ್ಳುವ ನಿರೀಕ್ಷೆ ಇರುವುದಾಗಿಯೂ ಸರ್ಕಾರ ಮಾಹಿತಿ ನೀಡಿದೆ. ಸಂಕಷ್ಟದಿಂದ ಬಳಲುತ್ತಿರುವ ಜನರಿಗೆ ಕೊಂಚ ನಿರಾಳತೆ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಇದೀಗ ಪರಿಹಾರ ಧನವನ್ನು ಬಿಡುಗಡೆ ಮಾಡಿರುವುದಾಗಿಯೂ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.