ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಖೋಜ್ಪುರಾದಲ್ಲಿ ಲಷ್ಕರ್-ಎ-ತೊಯ್ಬಾ (ಎಲ್ಇಟಿ) ಭಯೋತ್ಪಾದಕನನ್ನು ಭದ್ರತಾ ಪಡೆಗಳು ಶುಕ್ರವಾರ ಬಂಧಿಸಿದೆ. ಭಯೋತ್ಪಾದಕನನ್ನು ಎಂಡಿ ಯೂಸುಫ್ ಖಾನ್ ಪುತ್ರ ಝಾಕಿರ್ ಖಾನ್ ಮತ್ತು ಈತ ಶೋಪಿಯಾನ ನಿವಾಸಿ ಎಂದು ಗುರುತಿಸಲಾಗಿದೆ ಎಂದು ವರದಿಗಳು ತಿಳಿಸಿವೆ.
ಜಮ್ಮು ಮತ್ತು ಕಾಶ್ಮೀರ ಪೊಲೀಸರು ಭಯೋತ್ಪಾದನೆ ಸಂಬಂಧಿತ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಬಗ್ಗೆ ವಿಶೇಷ ಮಾಹಿತಿಯನ್ನು ಪಡೆದುಕೊಂಡು ಶೋಪಿಯಾನ ಜಿಲ್ಲೆಯ ಖೋಜ್ಪುರಾ ರೆಬನ್ ಗ್ರಾಮ ಪ್ರದೇಶದಲ್ಲಿ ಶುಕ್ರವಾರ ಮುಂಜಾನೆ ದಾಳಿ ನಡೆಸಿದ ನಂತರ ಈತನನ್ನು ಬಂಧಿಸಲಾಗಿದೆ. ಇತ್ತೀಚೆಗಷ್ಟೇ ಈತ ಭಯೋತ್ಪಾದಕ ಶ್ರೇಣಿಗೆ ಸೇರಿದ್ದಾನೆ ಮತ್ತು ಭಯೋತ್ಪಾದಕ ಹಿಂಸಾಚಾರದಲ್ಲಿ ಸಕ್ರಿಯನಾಗಿದ್ದಾನೆ ಎಂದು ವರದಿಯಾಗಿದೆ.
ಈ ನಡುವೆ ಪೊಲೀಸರು ಅವನ ಬಳಿ ಇದ್ದ ಒಂದು 9 ಎಂಎಂ ಪಿಸ್ತೂಲ್, 2 ಮ್ಯಾಗಜೀನ್, ಮದ್ದುಗುಂಡು ಮತ್ತು ಇತರ ಯುದ್ಧಕ್ಕೆ ಬಳಸುವ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.ಈತನ ವಿರುದ್ಧ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆಯನ್ನು ನಡೆಸಲಾಗುತ್ತಿದೆ.
ಈ ವರ್ಷ 20ಕ್ಕೂ ಹೆಚ್ಚು ಸಕ್ರಿಯ ಭಯೋತ್ಪಾದಕರನ್ನು ಭದ್ರತಾ ಪಡೆಗಳು ಜಮ್ಮು ಮತ್ತು ಕಾಶ್ಮೀರದಲ್ಲಿ ಬಂಧಿಸಿವೆ.
ಇತ್ತೀಚಿನ ದಿನಗಳಲ್ಲಿ ಭದ್ರತಾ ಪಡೆಗಳು ಹೆಚ್ಚು ಆಕ್ರಮಣಕಾರಿಯಾಗಿ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯನ್ನು ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಸುತ್ತಿವೆ. ಈಗಾಗಲೇ ಹಲವಾರು ಉಗ್ರರನ್ನು ಸಂಹಾರ ಮಾಡಲಾಗಿದೆ ಮತ್ತು ಹಲವರನ್ನು ಬಂಧಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.