ನವದೆಹಲಿ: ಕಳೆದ 24 ಗಂಟೆಗಳಲ್ಲಿ ಕೋವಿಡ್-19ಗಾಗಿ ಒಟ್ಟು 1,15,519 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಇದುವರೆಗೆ ದೇಶದಲ್ಲಿ ಒಟ್ಟು 57,74,133 ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ತಿಳಿಸಿದೆ.
“ಇದುವರೆಗೆ ಒಟ್ಟು 57,74,133 ಮಾದರಿಗಳನ್ನು ಪರೀಕ್ಷಿಸಲಾಗಿದೆ ಮತ್ತು ಕಳೆದ 24 ಗಂಟೆಗಳಲ್ಲಿ ಪರೀಕ್ಷಿಸಿದ ಮಾದರಿಗಳು 1,15,519” ಎಂದು ಐಸಿಎಂಆರ್ ತಿಳಿಸಿದೆ.
ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 11,502 ಕೊರೋನಾ ಪ್ರಕರಣಗಳು ಕಾಣಿಸಿಕೊಂಡಿದೆ. ಭಾರತದಲ್ಲಿ ದಾಖಲಾದ ಒಟ್ಟು ಕೋವಿಡ್ -19 ಪ್ರಕರಣಗಳು ಸೋಮವಾರ 3,32,424 ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.
1,53,106 ಸಕ್ರಿಯ ಪ್ರಕರಣಗಳು ಆಗಿದ್ದರೆ, 1,69,798 ರೋಗಿಗಳನ್ನು ಗುಣಪಡಿಸಲಾಗಿದೆ ಮತ್ತು ಬಿಡುಗಡೆ ಮಾಡಲಾಗಿದೆ. ಕೋವಿಡ್-19 ಕಾರಣದಿಂದ ಮೃತಪಟ್ಟವರ ಸಂಖ್ಯೆ ಈಗ 9,520 ಕ್ಕೆ ತಲುಪಿದೆ.
ಪ್ರಸ್ತುತ ದೇಶದಲ್ಲಿ ಆರ್ಥಿಕ ಚಟುವಟಿಕೆಗಳು ಪುನರಾರಂಭಗೊಂಡಿದ್ದು, ಜನ ದಟ್ಟನೆ ಮತ್ತು ವಾಹನ ಸಂಚಾರ ಸಹಜಸ್ಥಿತಿಯಲ್ಲಿ ಇದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.