ನವದೆಹಲಿ: ಜೂನ್ 20ರೊಳಗೆ ದೆಹಲಿ ಸರ್ಕಾರ ದಿನಕ್ಕೆ 18,000 ಕೋವಿಡ್ -19 ಪರೀಕ್ಷೆಗಳನ್ನು ನಡೆಸಲು ಪ್ರಾರಂಭಿಸಲಿದೆ ಎಂದು ಕೇಂದ್ರ ಗೃಹ ಸಚಿವರು ಹೇಳಿದ್ದಾರೆ ಎಂದು ದೆಹಲಿ ಬಿಜೆಪಿ ಮುಖ್ಯಸ್ಥ ಆದೇಶ್ ಕುಮಾರ್ ಗುಪ್ತಾ ಸೋಮವಾರ ಹೇಳಿದ್ದಾರೆ.
“ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜೂನ್ 20ರ ವೇಳೆಗೆ ದೆಹಲಿ ಸರ್ಕಾರವು ದಿನಕ್ಕೆ 18,000 ಕೋವಿಡ್ -19 ಪರೀಕ್ಷೆ ನಡೆಸುವ ಕಾರ್ಯ ಪ್ರಾರಂಭಿಸಲಿದೆ ಮತ್ತು ಮನೆ ಬಾಗಿಲಿಗೆ ಪತ್ತೆಹಚ್ಚುವಿಕೆ ಮತ್ತು ಮ್ಯಾಪಿಂಗ್ ಅನ್ನು ಕಂಟೈನ್ ವಲಯಗಳಲ್ಲಿ ನಡೆಸಲಾಗುತ್ತದೆ” ಎಂದು ರಾಷ್ಟ್ರ ರಾಜಧಾನಿಯಲ್ಲಿ ಸಾಂಕ್ರಾಮಿಕ ರೋಗದ ನಿರ್ವಹಣೆಯ ಬಗ್ಗೆ ನಡೆದ ಸರ್ವಪಕ್ಷ ಸಭೆಯ ಬಳಿಕ ಸುದ್ದಿಗಾರರಿಗೆ ತಿಳಿಸಿದರು.
ಗೃಹ ಸಚಿವಾಲಯದಲ್ಲಿ ಕೋವಿಡ್ -19 ಪರಿಸ್ಥಿತಿಯ ನಿರ್ವಹಣೆ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಅಧ್ಯಕ್ಷತೆಯಲ್ಲಿ ಸರ್ವಪಕ್ಷ ಸಭೆ ನಡೆಯಿತು. ಸರ್ವಪಕ್ಷ ಸಭೆಯಲ್ಲಿ “ಪರೀಕ್ಷೆಯಲ್ಲಿ 50 ಪ್ರತಿಶತ ಶುಲ್ಕವನ್ನು ಮನ್ನಾ ಮಾಡಬೇಕೆಂದು ಬಿಜೆಪಿ ಒತ್ತಾಯಿಸಿದೆ. ಈ ಬೇಡಿಕೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅನುಮೋದಿಸಿದ್ದಾರೆ” ಎಂದು ಗುಪ್ತಾ ಹೇಳಿದ್ದಾರೆ.
ಈ ಬಿಕ್ಕಟ್ಟಿನ ಸಮಯದಲ್ಲಿ ಎಲ್ಲಾ ರಾಜಕೀಯ ಪಕ್ಷಗಳು ತಮ್ಮ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಕೋವಿಡ್-19 ರ ವಿರುದ್ಧ ಹೋರಾಡಲು ಒಟ್ಟಾಗಿ ಮುಂದಾಗಬೇಕು ಎಂದು ಸಭೆಯ ಸಂದರ್ಭದಲ್ಲಿ ಶಾ ಒತ್ತಾಯಿಸಿದ್ದಾರೆ ಎಂದು ಅವರು ಹೇಳಿದರು. ಸಭೆಯಲ್ಲಿ ಬಿಜೆಪಿ, ಕಾಂಗ್ರೆಸ್, ಎಎಪಿ, ಇತರ ಪಕ್ಷಗಳ ಪ್ರತಿನಿಧಿಗಳು ಮತ್ತು ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.