ನವದೆಹಲಿ: ಲಡಾಖ್ನ ಗಾಲ್ವಾನ್ ಕಣಿವೆಯಲ್ಲಿ ಸೋಮವಾರ ರಾತ್ರಿ ಭಾರತೀಯ ಮತ್ತು ಚೀನಾ ಸೈನಿಕರ ನಡುವೆ ಹಿಂಸಾತ್ಮಕ ಮುಖಾಮುಖಿಯಾದ ಹಿನ್ನೆಲೆಯಲ್ಲಿ ಭಾರತ-ಚೀನಾ ಗಡಿ ಸಮಸ್ಯೆ ಕುರಿತು ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಬುಧವಾರ ಸರ್ವಪಕ್ಷ ಸಭೆ ನಡೆಸಲು ನಿರ್ಧರಿಸಿದ್ದಾರೆ.
ಇಂದು ಟ್ವೀಟ್ನಲ್ಲಿ ಪ್ರಧಾನಿ ಕಚೇರಿ ಈ ಬಗ್ಗೆ ಮಾಹಿತಿಯನ್ನು ನೀಡಿದೆ. “ಭಾರತ-ಚೀನಾ ಗಡಿ ಪ್ರದೇಶಗಳಲ್ಲಿನ ಪರಿಸ್ಥಿತಿ ಕುರಿತು ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಜೂನ್ 19 ರಂದು ಸಂಜೆ 5 ಗಂಟೆಗೆ ಸರ್ವಪಕ್ಷ ಸಭೆ ಕರೆದಿದ್ದಾರೆ. ಈ ವರ್ಚುವಲ್ ಸಭೆಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಅಧ್ಯಕ್ಷರು ಭಾಗವಹಿಸಲಿದ್ದಾರೆ” ಎಂದಿದೆ.
ಜೂನ್ 19 ರಂದು ಸಂಜೆ 5 ಗಂಟೆಗೆ ವರ್ಚುವಲ್ ಸಭೆ ನಡೆಯಲಿದ್ದು, ಪೂರ್ವ ಲಡಾಖ್ನಲ್ಲಿ ಪೆಟ್ರೋಲಿಂಗ್ ಪಾಯಿಂಟ್ ಸಂಖ್ಯೆ 14 ರಲ್ಲಿರುವ ಭಾರತೀಯ ಪಡೆಗಳು ಮತ್ತು ಚೀನೀ ಸೈನಿಕರ ನಡುವಿನ ಮುಖಾಮುಖಿ ಕುರಿತು ಇಲ್ಲಿ ಚರ್ಚಿಸಲಾಗುತ್ತದೆ. ಸಭೆಯಲ್ಲಿ ವಿವಿಧ ಪಕ್ಷಗಳ ಅಧ್ಯಕ್ಷರು ಭಾಗವಹಿಸಲಿದ್ದಾರೆ.
ಚೀನಾದ ಪಡೆ ಮತ್ತು ಭಾರತೀಯ ಸೇನಾ ಸಿಬ್ಬಂದಿಯ ನಡುವೆ ಸೋಮವಾರ ರಾತ್ರಿ ನಡೆದ ದಾಳಿ ಸುಮಾರು ಆರರಿಂದ ಏಳು ಗಂಟೆಗಳ ಕಾಲ ಮುಂದುವರೆದಿದೆ ಎಂದು ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.