ಪಾಟ್ನಾ: ಬಿಹಾರದ ಮುಜಾಫರ್ಪುರದಲ್ಲಿ ಶನಿವಾರ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿಯವರ ಸಮಾವೇಶದ ಸಂದರ್ಭ ದಾಳಿ ನಡೆಸಲು ಸಂಚು ರೂಪಿಸಿದ್ದ ಮೂವರು ಅನುಮಾನಾಸ್ಪದ ವ್ಯಕ್ತಿಗಳನ್ನು ಪೊಲೀಸರು ಇಂದು ಬೆಳಿಗ್ಗೆ ಬಂಧಿಸಿದ್ದಾರೆ.
ಅನುಮಾನಾಸ್ಪದ ಚಟುವಟಿಕೆ ನಡೆಸಿದ ಹಿನ್ನಲೆಯಲ್ಲಿ ಇವರನ್ನು ಬಂಧಿಸಿ ತನಿಖೆ ನಡೆಸಲಾಗುತ್ತಿದೆ.
ರಾಜೀವ್ ಗಾಂಧಿ ಮಾದರಿಯಲ್ಲಿ ಮಹಿಳಾ ಬಾಂಬರನ್ನು ಬಳಕೆ ಮಾಡಿ ಮೋದಿಯ ಹತ್ಯೆಗೆ ಸಂಚು ರೂಪಿಸಲಾಗಿದೆ ಎಂಬ ಎಚ್ಚರಿಕೆಯನ್ನು ಗುಪ್ತಚರ ಇಲಾಖೆ ನೀಡಿತ್ತು. ಇನ್ನೊಂದೆಡೆ ಮೋದಿ ಭೇಟಿಯನ್ನು ವಿರೋಧಿಸಿ ನಕ್ಸಲರು ಬಿಹಾರ ಬಂದ್ಗೆ ಕರೆ ನೀಡಿದ್ದಾರೆ.
ಈ ಹಿನ್ನಲೆಯಲ್ಲಿ ಸಮಾವೇಶದ ಸಂದರ್ಭ ಬಿಗಿ ಬಂದೋಬಸ್ತ್ಗಳನ್ನು ಏರ್ಪಡಿಸಲಾಗಿದೆ. ವೇದಿಕೆಯ ಬಳಿ ಇತರ ಯಾವುದೇ ವ್ಯಕ್ತಿಗಳು ಹೋಗದಂತೆ ತಡೆಯಲಾಗುತ್ತಿದೆ.
ಮೋದಿ ಸೇರಿದಂತೆ ಬಿಜೆಪಿಯ ಹಿರಿಯ ನಾಯಕರುಗಳು ಇಂದಿನ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಕೇವಲ ಸಮಾವೇಶ ಮಾತ್ರವಲ್ಲದೇ ವಿವಿಧ ಕಾರ್ಯಕ್ರಮಗಳಲ್ಲಿ ಅವರು ಭಾಗವಹಿಸಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.