ಬೆಳ್ತಂಗಡಿ : ಕಾನೂನು ಸೇವಾ ಪ್ರಾಧಿಕಾರ ಬೆಂಗಳೂರು ಮತ್ತು ಮಂಗಳೂರು ಇದರ ನಿರ್ದೇಶನ ಮೇರೆಗೆ ಜುಲೈ 19 ರಿಂದ 25ರ ವರೆಗೆ ಫ್ರೀ ಪ್ಲಾಂಟ್ ವೀಕ್ನ್ನು ಹಮ್ಮಿಕೊಳ್ಳಲಾಗಿದ್ದು ಇದರಂತೆ ಬೆಳ್ತಂಗಡಿ ನ್ಯಾಯಾಲಯ ಮತ್ತು ವಕೀಲರ ಸಂಘ ಅರಣ್ಯ ಇಲಾಖೆಯ ಸಹಭಾಗಿತ್ವದಲ್ಲಿ ಬೆಳ್ತಂಗಡಿಯಲ್ಲಿ ಗಿಡಗಳನ್ನು ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಂಡರು.
ಬೆಳ್ತಂಗಡಿ ನ್ಯಾಯಾಲಯದ ಹಿರಿಯ ಶ್ರೇಣಿ ನ್ಯಾಯಾಧೀಶರಾದ ಜಿ. ರಾಘವೇಂದ್ರ ಅವರು ಬೆಳ್ತಂಗಡಿ ತಾಲೂಕು ಪಂಚಾಯತ್ನ ವಸತಿಗೃಹದ ಆವರಣದಲ್ಲಿ ಗಿಡವನ್ನು ನಡೆವುದರ ಮೂಲಕ ಚಾಲನೆ ನೀಡಿದರು. ಬೆಳ್ತಂಗಡಿ ನ್ಯಾಯಾಲಯದ ಪ್ರಧಾನ ಸಿವಿಲ್ ನ್ಯಾಯಾಧೀಶೆ ಎ. ಅರುಣಾಕುಮಾರಿ, ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಜೈಶಂಕರ್ಜೆ., ತಾಪಂ ಕಾರ್ಯನಿರ್ವಾಹಣಾಧಿಕಾರಿ ಕೆ.ಎನ್.ಮಹಾಂತೇಶ್, ಬೆಳ್ತಂಗಡಿ ನ್ಯಾಯಾಲಯದ ಸುವರ್ಣ ಮಹೋತ್ಸವ ಅಧ್ಯಕ್ಷ ಶಿವಕುಮಾರ್, ವಕೀಲರ ಸಂಘದ ಅಧ್ಯಕ್ಷ ಶಶಿಕಿರಣ್ ಜೈನ್, ಎಪಿಪಿಗಳಾದ ಚಂದ್ರ, ಕಿರಣ್, ಫಾರೆಸ್ಟರ್ ಹರಿಪ್ರಸಾದ್, ವಕೀಲರಾದ ಸ್ವರ್ಣಲತಾ, ಮುಮ್ತಾಜ್ ಬೇಗಂ, ತಾಪಂನ ಪ್ರಬಂಧಕ ಗಣೇಶ್ ಪೂಜಾರಿ, ತಾಪಂ ಸಂಯೋಜಕ ಜಯಾನಂದ, ಅಶೋಕ್ ದೇವಾಡಿಗ, ಅರಣ್ಯ ಇಲಾಖೆಯ ಸಿಬಂದಿಗಳುಇದ್ದರು. ಬೆಳ್ತಂಗಡಿ ಪಟ್ಟಣ ಪಂಚಾಯತ್ ಬಳಿ, ಪೋಲೀಸ್ ವಸತಿ ಗೃಹ ಆವರಣದಲ್ಲಿ ಗಿಡಗಳನ್ನು ನೆಡಲಾಯಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.