ನವದೆಹಲಿ : ಎಂಟು ರಾಜ್ಯಗಳ 19 ರಾಜ್ಯಸಭಾ ಸ್ಥಾನಗಳಿಗೆ ಶುಕ್ರವಾರ ಚುನಾವಣೆ ನಡೆಯಲಿದೆ. ರಾಜ್ಯಸಭಾ ಚುನಾವಣೆಗೆ ಸ್ಪರ್ಧಿಸಲಿರುವ 19 ಸ್ಥಾನಗಳಲ್ಲಿ ತಲಾ ನಾಲ್ಕು ಸ್ಥಾನಗಳು ಆಂಧ್ರಪ್ರದೇಶ ಮತ್ತು ಗುಜರಾತ್ಗೆ ಸೇರಿವೆ, ಮಧ್ಯಪ್ರದೇಶ ಮತ್ತು ರಾಜಸ್ಥಾನದಿಂದ ತಲಾ ಮೂರು, ಜಾರ್ಖಂಡ್ನಿಂದ ಎರಡು ಮತ್ತು ಮಣಿಪುರ, ಮಿಜೋರಾಂ ಮತ್ತು ಮೇಘಾಲಯದಿಂದ ತಲಾ ಒಂದು ಸ್ಥಾನಗಳಾಗಿವೆ.
ಕೊರೋನಾವೈರಸ್ ಮತ್ತು ಲಾಕ್ಡೌನ್ ಕಾರಣ ಚುನಾವಣೆಯನ್ನು ಮುಂದೂಡಲಾಗಿತ್ತು. ಮತದಾನವನ್ನು ಮೂಲತಃ ಮಾರ್ಚ್ 26 ರಂದು ನಡೆಸಲು ನಿರ್ಧರಿಸಲಾಗಿತ್ತು ಆದರೆ ಮಾರ್ಚ್ 24 ರಂದು ಭಾರತದ ಚುನಾವಣಾ ಆಯೋಗ ಮುಂದೂಡುವಿಕೆಯನ್ನು ಪ್ರಕಟಿಸಿತ್ತು.
ಜೂನ್ 19 ರಂದು ಬೆಳಿಗ್ಗೆ 9 ಗಂಟೆಗೆ ಮತದಾನ ಪ್ರಾರಂಭವಾಗಲಿದೆ. ಈ ಹಿಂದೆ ಚುನಾವಣಾ ಆಯೋಗ ಪ್ರಕಟಿಸಿದ ಪ್ರಕಾರ ಮತ ಎಣಿಕೆ ಜೂನ್ 19 ರ ಸಂಜೆ ನಡೆಯಲಿದೆ.
ಕೊರೋನಾವೈರಸ್ ಸಾಂಕ್ರಾಮಿಕವನ್ನು ಗಮನದಲ್ಲಿಟ್ಟುಕೊಂಡು ಚುನಾವಣಾ ಆಯೋಗ ಮತದಾನಕ್ಕಾಗಿ ವಿಸ್ತಾರವಾದ ವ್ಯವಸ್ಥೆಗಳನ್ನು ಮಾಡಿದೆ. ಪ್ರತಿಯೊಬ್ಬ ಮತದಾರನನ್ನೂ ದೇಹದ ತಾಪಮಾನಕ್ಕಾಗಿ ಪರೀಕ್ಷಿಸಲಾಗುತ್ತದೆ ಮತ್ತು ಮುಖಗವಸು ಬಳಕೆ ಕಡ್ಡಾಯ ಮಾಡಲಾಗಿದೆ. ಸಾಮಾಜಿಕ ಅಂತರದ ಮಾನದಂಡಗಳಿಗೆ ಬದ್ಧವಾಗಿ ಎಲ್ಲಾ ಪ್ರಕ್ರಿಯೆ ನಡೆಯಲಿದೆ. ಜ್ವರ ಅಥವಾ ಇತರ ರೋಗಲಕ್ಷಣಗಳನ್ನು ಹೊಂದಿರುವ ಶಾಸಕರನ್ನು ಪ್ರತ್ಯೇಕ ಕೋಣೆಯಲ್ಲಿ ಇಡಲಾಗುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.