ವಾಷಿಂಗ್ಟನ್: ಲಡಾಖ್ನ ಗಾಲ್ವಾನ್ ವ್ಯಾಲಿ ಪ್ರದೇಶದಲ್ಲಿ ಇತ್ತೀಚೆಗೆ ಚೀನಾ ಪಡೆಗಳೊಂದಿಗೆ ನಡೆದ ಮುಖಾಮುಖಿಯಲ್ಲಿ 20 ಭಾರತೀಯ ಸೈನಿಕರು ಹುತಾತ್ಮರಾದ ಹಿನ್ನಲೆಯಲ್ಲಿ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮೈಕ್ ಪೊಂಪಿಯೊ ಭಾರತದ ಜನರಿಗೆ ಸಂತಾಪ ಸೂಚಿಸಿದ್ದಾರೆ.
“ಚೀನಾದೊಂದಿಗಿನ ಇತ್ತೀಚಿನ ಮುಖಾಮುಖಿಯ ಪರಿಣಾಮವಾಗಿ ಕಳೆದುಹೋದ ಜೀವಗಳಿಗಾಗಿ ನಾವು ಭಾರತದ ಜನರಿಗೆ ಸಂತಾಪ ಸೂಚಿಸುತ್ತೇವೆ. ದುಃಖದಲ್ಲಿರುವ ಸೈನಿಕರ ಕುಟುಂಬಗಳು, ಪ್ರೀತಿಪಾತ್ರರು ಮತ್ತು ಸಮುದಾಯಗಳನ್ನು ನಾವು ನೆನಪಿಸಿಕೊಳ್ಳುತ್ತೇವೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.
ಎಲ್ಎಸಿ ಉದ್ದಕ್ಕೂ ಭಾರತ ಮತ್ತು ಚೀನಾ ನಡುವಿನ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ ಎಂದು ಅಮೆರಿಕ ಗುರುವಾರ ಹೇಳಿದೆ. “20 ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಭಾರತೀಯ ಮಿಲಿಟರಿ ಘೋಷಿಸಿದೆ ಮತ್ತು ಅವರ ಕುಟುಂಬಗಳಿಗೆ ನಮ್ಮ ಸಂತಾಪವನ್ನು ಅರ್ಪಿಸುತ್ತೇವೆ” ಎಂದು ವಿದೇಶಾಂಗ ಇಲಾಖೆಯ ವಕ್ತಾರರು ತಿಳಿಸಿದ್ದಾರೆ.
ಭಾರತ ಮತ್ತು ಚೀನಾ ಎರಡೂ ಪರಿಸ್ಥಿತಿಯನ್ನು ತಿಳಿಗೊಳಿಸುವ ಬಯಕೆಗಳನ್ನು ವ್ಯಕ್ತಪಡಿಸಿವೆ ಮತ್ತು ಪ್ರಸ್ತುತ ಪರಿಸ್ಥಿತಿಯ ಶಾಂತಿಯುತ ಪರಿಹಾರವನ್ನು ಯುಎಸ್ ಬೆಂಬಲಿಸುತ್ತದೆ ಎಂದು ವಕ್ತಾರರು ತಿಳಿಸಿದ್ದಾರೆ.
ಜೂನ್ 15 ರ ರಾತ್ರಿ ಲಡಾಕ್ನ ಗಾಲ್ವಾನ್ ಕಣಿವೆಯಲ್ಲಿ ಭಾರತ ಮತ್ತು ಚೀನಾ ಸೈನಿಕರ ನಡುವೆ ನಡೆದ ಹಿಂಸಾತ್ಮಕ ಘರ್ಷಣೆಯಲ್ಲಿ 20 ಭಾರತೀಯ ಸೈನಿಕರು ಪ್ರಾಣ ಕಳೆದುಕೊಂಡ ಹಿನ್ನೆಲೆಯಲ್ಲಿ ಅಮೆರಿಕದಿಂದ ಸಂತಾಪ ಸಂದೇಶ ಬಂದಿದೆ.
We extend our deepest condolences to the people of India for the lives lost as a result of the recent confrontation with China. We will remember the soldiers’ families, loved ones, and communities as they grieve.
— Secretary Pompeo (@SecPompeo) June 19, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.