ಶ್ರೀನಗರ: ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಮತ್ತೆ ಭಾರತೀಯ ಭದ್ರತಾ ಪಡೆಗಳು ಮತ್ತು ಉಗ್ರಗಾಮಿಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಭದ್ರತಾ ಪಡೆಗಳ ಎನ್ಕೌಂಟರ್ಗೆ ಇಬ್ಬರು ಉಗ್ರರು ವಧಿಸಲ್ಪಟ್ಟಿದ್ದಾರೆ. ಕಾರ್ಯಾಚರಣೆಯಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದಾರೆ ಎಂದು ವರದಿಗಳು ತಿಳಿಸಿವೆ.
ಪುಲ್ವಾಮಾದ ಬಂಡ್ಜೋ ಪ್ರದೇಶದಲ್ಲಿ ಉಗ್ರಗಾಮಿಗಳು ರಹಸ್ಯ ಕಾರ್ಯಾಚರಣೆ ನಡೆಸುತ್ತಿರುವ ಖಚಿತ ಮಾಹಿತಿಯನ್ನು ಆಧರಿಸಿ ನಡೆಸಲಾದ ಕಾರ್ಯಾಚರಣೆಯಲ್ಲಿ ಇಬ್ಬರು ಅಪರಿಚಿತ ಉಗ್ರರನ್ನು ಸಂಹಾರ ಮಾಡಲಾಗಿದೆ. ಈ ವೇಳೆ ಉಗ್ರರ ಗುಂಡಿಗೆ ಸಿಆರ್ಪಿಎಫ್ ಯೋಧ ಹುತಾತ್ಮರಾಗಿದ್ದಾಗಿಯೂ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕಾರ್ಯಾಚರಣೆ ವೇಳೆ ಯೋಧರು ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ಸಂದರ್ಭದಲ್ಲಿ ಯೋಧ ಹುತಾತ್ಮರಾಗಿದ್ದಾಗಿ ಸಂಬಂಧಿಸಿದ ಅಧಿಕಾರಿಗಳು ತಿಳಿಸಿದ್ದು, ಉಗ್ರರಿಂದ ಎಕೆ-47 ಬಂದೂಕುಗಳಿರುವುನ್ನು ಪತ್ತೆಹಚ್ಚಿದ್ದಾರೆ. ಪ್ರದೇಶದಲ್ಲಿ ಮತ್ತಷ್ಟು ಉಗ್ರರು ಅಡಗಿಕೊಂಡಿರುವ ಗುಮಾನಿ ಇದ್ದು, ಭದ್ರತಾ ಪಡೆಗಳು ಶೋಧ ಕಾರ್ಯ ಮುಂದುವರೆಸಿರುವುದಾಗಿಯೂ ತಿಳಿದು ಬಂದಿದೆ.
ಕಳೆದ ಒಂದು ತಿಂಗಳಿಗೂ ಹೆಚ್ಚು ದಿನಗಳಿಂದ ಜಮ್ಮು ಕಾಶ್ಮೀರದ ವಿವಿಧ ಪ್ರದೇಶಗಳಲ್ಲಿ ಪಾಕಿಸ್ಥಾನ ಪ್ರೇರಿತ ಉಗ್ರರು ರಹಸ್ಯ ಕಾರ್ಯಾಚರಣೆ, ಒಳ ನುಸುಳುವಿಕೆ ಮೊದಲಾದ ಕುಕೃತ್ಯಗಳನ್ನು ನಡೆಸುತ್ತಿದ್ದು, ನೂರಕ್ಕೂ ಅಧಿಕ ಉಗ್ರರನ್ನು ಭಾರತೀಯ ಸೇನಾಪಡೆಗಳು ವಿವಿಧ ಕಾರ್ಯಾಚರಣೆಗಳನ್ನು ನಡೆಸಿ ಸಂಹರಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.