ನವದೆಹಲಿ: ಜಗತ್ತನ್ನೇ ನಡುಗಿಸಿರುವ ಕೊರೋನಾ ವೈರಸ್ ಭಾರತದಲ್ಲಿಯೂ ತನ್ನ ಕರಾಳತೆಯನ್ನು ಪ್ರದರ್ಶನ ಮಾಡುತ್ತಿದೆ. ದೇಶದಲ್ಲಿ ಈ ವರೆಗೆ ಸುಮಾರು 4,40,215 ಕೊರೋನಾ ಪ್ರಕರಣಗಳು ವರದಿಯಾಗಿದ್ದು, 14,011ರಷ್ಟು ಸಾವು ಸಂಭವಿಸಿದೆ. ನಿನ್ನೆ ದೇಶದಲ್ಲಿ 312 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ ಎಂಬುದಾಗಿಯೂ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ ಎಂದು ವರದಿಗಳು ತಿಳಿಸಿವೆ.
ಈ ವರೆಗೆ ಕೊರೋನಾದಿಂದ ಚೇತರಿಸಿಕೊಂಡವರ ಸಂಖ್ಯೆ 2,48,189 ಆಗಿದ್ದು, ಚೇತರಿಕೆಯ ಪ್ರಮಾಣ 56.37%ರಷ್ಟು ದಾಖಲಾಗಿದೆ ಎಂದೂ ಐಸಿಎಂಆರ್ ಮಾಹಿತಿ ನೀಡಿದೆ. 1,78,014 ಮಂದಿ ಕೊರೋನಾಗೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿರುವುದಾಗಿಯೂ ಸಂಸ್ಥೆ ತನ್ನ ವರದಿಯಲ್ಲಿ ತಿಳಿಸಿದೆ.
ಅತೀ ಹೆಚ್ಚು ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಮಹಾರಾಷ್ಟ್ರ ಮೊದಲನೇ ಸ್ಥಾನದಲ್ಲಿದ್ದರೆ, ತಮಿಳುನಾಡನ್ನು ಹಿಂದಿಕ್ಕಿ ದೆಹಲಿ 59,000 ಕ್ಕೂ ಅಧಿಕ ಕೊರೋನಾ ಪ್ರಕರಣಗಳ ಮೂಲಕ ಎರಡನೇ ಸ್ಥಾನಕ್ಕೇರಿದೆ. ದೆಹಲಿಯಲ್ಲಿ ಕೊರೋನಾ ಸಾವಿನ ಸಂಖ್ಯೆ 2,233 ಆಗಿದ್ದು, 3,589 ಮಂದಿ ಚೇತರಿಸಿಕೊಂಡಿದ್ದಾರೆ ಎಂಬುದಾಗಿಯೂ ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ದೇಶದಲ್ಲಿ ಈ ವರೆಗೆ 71 ಲಕ್ಷ ಜನರಿಗೆ ಕೊರೋನಾ ಪರೀಕ್ಷೆ ನಡೆಸಲಾಗಿರುವುದಾಗಿಯೂ ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಇತರ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಕಡಿಮೆ ಪ್ರಮಾಣದಲ್ಲಿ ಸೋಂಕು ಪತ್ತೆಯಾಗಿರುವುದಾಗಿಯೂ ಸಂಸ್ಥೆ ಮಾಹಿತಿ ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.