ನವದೆಹಲಿ: ಕೋವಿಡ್-19 ಮಾದರಿಗಳನ್ನು ಪರೀಕ್ಷಿಸಲು ದೇಶಾದ್ಯಂತ ತೆರೆಯಲಾಗಿರುವ ಒಟ್ಟು ಪ್ರಯೋಗಾಲಯಗಳ ಸಂಖ್ಯೆ 1,000 ಕ್ಕೆ ಏರಿದೆ, ಇದರಲ್ಲಿ 730 ಸರ್ಕಾರಿ ಪ್ರಯೋಗಾಲಯಗಳು ಮತ್ತು 270 ಖಾಸಗಿ ಪ್ರಯೋಗಾಲಯಗಳು ಸೇರಿವೆ ಎಂದು ವರದಿಗಳು ತಿಳಿಸಿವೆ.
ಪ್ರಯೋಗಾಲಯಗಳ ಸಂಖ್ಯೆಯಲ್ಲಿ ಹೆಚ್ಚಳದೊಂದಿಗೆ, ದೇಶದ ಕೋವಿಡ್ -19 ಪರೀಕ್ಷಾ ಸಾಮರ್ಥ್ಯವು ದಿನಕ್ಕೆ ಎರಡು ಲಕ್ಷ ಮಾದರಿಗಳಿಗೆ ಏರಿದೆ.
ಈ ಬೆಳವಣಿಗೆಯ ಬಗ್ಗೆ ಮಾಹಿತಿಯನ್ನು ನೀಡಿರುವ ಐಸಿಎಂಆರ್ನ ಮಹಾನಿರ್ದೇಶಕ ಡಾ. ಬಲರಾಮ್ ಭಾರ್ಗವ ಅವರು, “ಇದು ಕೊರೋನಾದ ವಿರುದ್ಧದ ಹೋರಾಟದಲ್ಲಿ ಒಂದು ಪ್ರಮುಖ ಮೈಲಿಗಲ್ಲು. ಆರಂಭದಿಂದಲೂ ನಾವು ರೋಗದ ಪರೀಕ್ಷೆ, ಪತ್ತೆ ಮತ್ತು ಚಿಕಿತ್ಸೆಗೆ ಹೆಚ್ಚಿನ ಗಮನವನ್ನು ನೀಡುತ್ತಾ ಬಂದಿದ್ದೇವೆ. ಪರೀಕ್ಷಾ ಸಾಮರ್ಥ್ಯದ ಹೆಚ್ಚಳದ ಮೂಲಕ ನಾವು ಈ ವೈರಸ್ ವಿರುದ್ಧ ಹೋರಾಡುತ್ತಿದ್ದೇವೆ” ಎಂದಿದ್ದಾರೆ.
“ದೇಶದ ಪ್ರತಿಯೊಂದು ಜಿಲ್ಲೆಯಲ್ಲೂ ಪ್ರಯೋಗಾಲಯವನ್ನು ಸ್ಥಾಪಿಸುವುದು ನಮ್ಮ ಗುರಿಯಾಗಿತ್ತು, ಅದನ್ನು ನಾವು ದೊಡ್ಡ ಮಟ್ಟದಲ್ಲಿ ಸಾಧಿಸಿದ್ದೇವೆ” ಎಂದು ಅವರು ಹೇಳಿದರು.
ಜೂನ್ 22ರವರೆಗೆ, ಪ್ರಯೋಗಾಲಯಗಳಾದ್ಯಂತ ಕೋವಿಡ್-19ಗಾಗಿ 71 ಲಕ್ಷ ಮಾದರಿಗಳನ್ನು ಪರೀಕ್ಷಿಸಲಾಗಿದೆ.
ಮಂಗಳವಾರ ಪ್ರಯೋಗಾಲಯಗಳು 1.87 ಲಕ್ಷ ಮಾದರಿಗಳನ್ನು ಪರೀಕ್ಷಿಸಿವೆ ಎಂದು ಐಸಿಎಂಆರ್ ಡೇಟಾ ತೋರಿಸಿದೆ.
ಈ ನಡುವೆ, ಮಂಗಳವಾರದ ವೇಳೆಗೆ, ಕೋವಿಡ್-19ನ ಒಟ್ಟು ದೃಢಪಡಿಸಿದ ಪ್ರಕರಣಗಳ ಸಂಖ್ಯೆ 4.55 ಲಕ್ಷಕ್ಕೂ ಹೆಚ್ಚಾಗಿದೆ, ಕಳೆದ ಏಳು ದಿನಗಳಲ್ಲಿ ಲಕ್ಷಕ್ಕೂ ಹೆಚ್ಚು ಹೊಸ ಪ್ರಕರಣಗಳು ದಾಖಲಾಗಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.