ನವದೆಹಲಿ: ಭಾರತದಲ್ಲಿ ಕೋವಿಡ್-19 ಚೇತರಿಕೆ ದರವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಸ್ವಲ್ಪ ಮಟ್ಟಿಗೆ ನಿರಾಳತೆಯನ್ನು ನೀಡಿದೆ. ಪ್ರಸ್ತುತ ದೇಶದ ಚೇತರಿಕೆ ದರ 57.43% ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.
ಇದುವರೆಗೆ 2 ಲಕ್ಷ 71 ಸಾವಿರ 697 ಜನರು ಇದುವರೆಗೆ ದೇಶದಲ್ಲಿ ಗುಣಮುಖರಾಗಿ ಮನೆಗೆ ಮರಳಿದ್ದಾರೆ. ಕಳೆದ 24 ಗಂಟೆಗಳಲ್ಲಿ 13,012 ಜನರು ಕೋವಿಡ್-19ನಿಂದ ಗುಣಮುಖರಾಗಿದ್ದಾರೆ. ಪ್ರಸ್ತುತ ದೇಶದಲ್ಲಿ 86,514 ಮಂದಿ ಕೊರೋನಾದಿಂದ ಗುಣಮುಖರಾಗಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.
ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 16,922 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ಈ ಮೂಲಕ ದೇಶದ ಒಟ್ಟು ಕೊರೋನಾ ಪ್ರಕರಣಗಳು 4 ಲಕ್ಷದ 73,105ಕ್ಕೆ ಏರಿಕೆಯಾಗಿದೆ. ಇದು ಇದುವರೆಗೆ ದಾಖಲಾದ ಅತೀ ದೊಡ್ಡ ಸಂಖ್ಯೆಯ ಪ್ರಕರಣವಾಗಿದೆ. ಈ ಅವಧಿಯಲ್ಲಿ 418 ಸಾವುಗಳು ಸಂಭವಿಸಿದೆ. ಈ ಮೂಲಕ ಒಟ್ಟು ಸಾವಿನ ಪ್ರಕರಣ 14,894ಕ್ಕೆ ಏರಿದೆ.
ದೇಶದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ, ಪರೀಕ್ಷೆಗಳ ಸಂಖ್ಯೆಯನ್ನು ಕೂಡ ಹೆಚ್ಚಳ ಮಾಡಲಾಗಿದೆ. ಪ್ರಸ್ತುತ ದೇಶದಲ್ಲಿ ಒಂದು ಸಾವಿರ ಲ್ಯಾಬ್ ಗಳು ಕಾರ್ಯಾಚರಿಸುತ್ತಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.