ನವದೆಹಲಿ: ಇಂದು ಮಾದಕವಸ್ತು ಮತ್ತು ಅಕ್ರಮ ಕಳ್ಳಸಾಗಣೆ ವಿರುದ್ಧದ ಅಂತರರಾಷ್ಟ್ರೀಯ ದಿನವಾಗಿದೆ. 1987 ರಲ್ಲಿ, ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿ ಜೂನ್ 26 ಅನ್ನು ಮಾದಕ ದ್ರವ್ಯ ಸೇವನೆ ಮತ್ತು ಅಕ್ರಮ ಕಳ್ಳಸಾಗಣೆ ವಿರುದ್ಧದ ಅಂತರರಾಷ್ಟ್ರೀಯ ದಿನವಾಗಿ ಆಚರಿಸಲು ನಿರ್ಧರಿಸಿತು.
ಮಾದಕವಸ್ತು ಮತ್ತು ಅಕ್ರಮ ಕಳ್ಳಸಾಗಣೆ ವಿರುದ್ಧದ ಈ ವರ್ಷದ ಅಂತರರಾಷ್ಟ್ರೀಯ ದಿನದ ಥೀಮ್ ಎಂದರೆ, “ಉತ್ತಮ ಆರೈಕೆಗಾಗಿ ಉತ್ತಮ ಜ್ಞಾನ”. ಈ ಥೀಮ್ ವಿಶ್ವ ಮಾದಕ ದ್ರವ್ಯ ಸಮಸ್ಯೆಯ ತಿಳುವಳಿಕೆಯನ್ನು ಸುಧಾರಿಸುವ ಅಗತ್ಯವನ್ನು ಒತ್ತಿಹೇಳುತ್ತದೆ. ಈ ಬಗೆಗಿನ ಉತ್ತಮ ಜ್ಞಾನವು ಅಂತರರಾಷ್ಟ್ರೀಯ ಸಹಕಾರವನ್ನು ಹೆಚ್ಚಿಸುತ್ತದೆ. ಈ ಸಹಕಾರವು ಆರೋಗ್ಯ, ಆಡಳಿತ ಮತ್ತು ಸುರಕ್ಷತೆಯ ಮೇಲೆ ಪ್ರಭಾವ ಬೀರುತ್ತದೆ.
ಪ್ರತಿವರ್ಷ ವ್ಯಕ್ತಿಗಳು, ಸಮುದಾಯಗಳು ಮತ್ತು ಪ್ರಪಂಚದಾದ್ಯಂತದ ವಿವಿಧ ಸಂಸ್ಥೆಗಳಿಂದ ಬೆಂಬಲಿತವಾದ ಈ ಜಾಗತಿಕ ಆಚರಣೆಯು ಅಕ್ರಮ ಮಾದಕ ದ್ರವ್ಯಗಳಿಂದ ಸಮಾಜ ಎದುರಿಸುತ್ತಿರುವ ಪ್ರಮುಖ ಸಮಸ್ಯೆಯ ಬಗ್ಗೆ ಜಾಗೃತಿ ಮೂಡಿಸುವ ಗುರಿಯನ್ನು ಹೊಂದಿದೆ.
2018 ರಲ್ಲಿ ವಿಶ್ವಾದ್ಯಂತ ಸುಮಾರು 269 ಮಿಲಿಯನ್ ಜನರು ಡ್ರಗ್ಸ್ ಬಳಸಿದ್ದಾರೆ, ಇದು 2009 ಕ್ಕೆ ಹೋಲಿಸಿದರೆ ಶೇಕಡಾ 30 ರಷ್ಟು ಹೆಚ್ಚಾಗಿದೆ. ಅಲ್ಲದೇ 35 ದಶಲಕ್ಷಕ್ಕೂ ಹೆಚ್ಚು ಜನರು ಮಾದಕವಸ್ತು ಬಳಕೆಯ ಕಾಯಿಲೆಯಿಂದ ಬಳಲುತ್ತಿದ್ದಾರೆ ಎಂದು ಇತ್ತೀಚಿನ ವಿಶ್ವ ಡ್ರಗ್ಸ್ ವರದಿಯಲ್ಲಿ ತಿಳಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.