ನದವೆಹಲಿ: ಪ್ರಮುಖ ಬೆಳವಣಿಗೆಯೊಂದರಲ್ಲಿ, 2020-21ರಲ್ಲಿ ಜಮ್ಮು-ಕಾಶ್ಮೀರ ಮತ್ತು ಉತ್ತರಾಖಂಡದ ಹೆದ್ದಾರಿ ಕಾಮಗಾರಿಗಳಿಗಾಗಿ ಗಡಿ ರಸ್ತೆಗಳ ಸಂಸ್ಥೆ (ಬಿಆರ್ಒ)ಗೆ 1,691 ಕೋಟಿ ರೂ.ಗಳ ಹೆಚ್ಚುವರಿ ಬಜೆಟ್ ವಿನಿಯೋಗವನ್ನು ಕೇಂದ್ರ ಅನುಮೋದಿಸಿದೆ ಎಂದು ವರದಿಗಳು ತಿಳಿಸಿವೆ.
ಅನುಮೋದಿತ ಒಟ್ಟು ನಿಧಿಯ ಪೈಕಿ 1,351.1 ಕೋಟಿ ರೂಪಾಯಿಗಳನ್ನು ಜಮ್ಮು ಮತ್ತು ಕಾಶ್ಮೀರ ರಸ್ತೆಗಳ ನಿರ್ಮಾಣಕ್ಕೆ ಮಂಜೂರು ಮಾಡಲಾಗಿದ್ದು, ಉತ್ತರಾಖಂಡದಲ್ಲಿ ರಸ್ತೆ ನಿರ್ಮಾಣಕ್ಕೆ 340 ಕೋಟಿ ರೂಪಾಯಿಗಳನ್ನು ಮಂಜೂರು ಮಾಡಲಾಗಿದೆ.
ಇವುಗಳಲ್ಲದೆ, ಜಮ್ಮು ಮತ್ತು ಕಾಶ್ಮೀರ, ಲಡಾಖ್, ಸಿಕ್ಕಿಂ ಮತ್ತು ತಮಿಳುನಾಡಿನ ಲೋಕೋಪಯೋಗಿ ಇಲಾಖೆಗಳು ಕೈಗೆತ್ತಿಕೊಳ್ಳಬೇಕಾದ ಹೆದ್ದಾರಿ ಕಾಮಗಾರಿಗಳಿಗೆ ಹೆಚ್ಚುವರಿಯಾಗಿ 71 ಕೋಟಿ ರೂಪಾಯಿಗಳನ್ನು ಸರ್ಕಾರ ಮಂಜೂರು ಮಾಡಿದೆ. ಅಲ್ಲದೇ, ಬುಡಕಟ್ಟು ಉಪ ಯೋಜನೆಯಡಿ ನಾಗಾಲ್ಯಾಂಡ್ನಲ್ಲಿ ಹೆದ್ದಾರಿಗಳ ನಿರ್ಮಾಣದ ಒಟ್ಟು ಮೊತ್ತವನ್ನು ರೂ.1,081 ಕೋಟಿಯಿಂದ 1,955 ಕೋಟಿ ರೂ.ಗೆ ಸರ್ಕಾರ ಹೆಚ್ಚಿಸಿದೆ.
ರಾಷ್ಟ್ರೀಯ ಹೆದ್ದಾರಿಗಳು ಮತ್ತು ಕಾರ್ಯತಂತ್ರದ ರಸ್ತೆಗಳ ನಿರ್ಮಾಣ, ನಿರ್ವಹಣೆ ಮತ್ತು ಉನ್ನತೀಕರಣದಲ್ಲಿ ತೊಡಗಿರುವ ಸರ್ಕಾರದ ರಾಷ್ಟ್ರೀಯ ಹೆದ್ದಾರಿಗಳು ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ ಲಿಮಿಟೆಡ್ (ಎನ್ಎಚ್ಐಡಿಸಿಎಲ್) ಕಠಿಣ ಪ್ರದೇಶಗಳಲ್ಲಿ ಕೆಲಸ ಮಾಡುವ ತನ್ನ ಸಿಬ್ಬಂದಿಯ ವೇತನವನ್ನು ಹೆಚ್ಚಳವನ್ನು ಘೋಷಿಸಿದ ನಂತರ ಈ ಬೆಳವಣಿಗೆ ನಡೆದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.