ಬೆಂಗಳೂರು: ಈ ಹಿಂದೆ ವಿದ್ಯಾರ್ಥಿಗಳಿಗೆ ಆನ್ಲೈನ್ ಶಿಕ್ಷಣ ನೀಡುವುದನ್ನು ರದ್ದು ಮಾಡಿದ್ದ ಸರ್ಕಾರ, ಈಗ ಮತ್ತೆ ಆನ್ಲೈನ್ ಶಿಕ್ಷಣ ನೀಡುವುದಕ್ಕೆ ಒಪ್ಪಿಗೆ ನೀಡಿ ಆದೇಶ ಹೊರಡಿಸಿದೆ. 1 ರಿಂದ 10 ನೇ ತರಗತಿಯ ವಿದ್ಯಾರ್ಥಿಗಳಿಗೆ ಶಿಕ್ಷಣ ಸಂಸ್ಥೆಗಳು ಆನ್ಲೈನ್ ಮೂಲಕ ಜ್ಞಾನಾರ್ಜನೆ ಮಾಡಲು ಪೂರಕ ವ್ಯವಸ್ಥೆ ರೂಪಿಸಲು ತಿಳಿಸಿದೆ.
ಈ ಬಗ್ಗೆ ಅಧಿಕೃತ ಮಾರ್ಗಸೂಚಿ ಹೊರಡಿಸಿರುವ ರಾಜ್ಯ ಶಿಕ್ಷಣ ಇಲಾಖೆ, ಅಂತಿಮ ಮಾರ್ಗಸೂಚಿ, ನಿಯಮಗಳನ್ನು ಪ್ರಕಟಿಸುವವರೆಗೆ ಇದನ್ನೇ ಅನುಸರಿಸುವಂತೆ ಸೂಚಿಸಿದೆ. ಜೊತೆಗೆ ಆನ್ಲೈನ್ ಶಿಕ್ಷಣ ನೀಡುವ ನೆಪವನ್ನಿಟ್ಟುಕೊಂಡು ಪೋಷಕರಿಂದ ಹೆಚ್ಚುವರಿ ಹಣವನ್ನು ವಸೂಲಿ ಮಾಡುವಂತಿಲ್ಲ ಎಂಬುದಾಗಿಯೂ ಎಚ್ಚರಿಕೆ ನೀಡಿದೆ. ಈ ಹಿಂದೆ ಆನ್ಲೈನ್ ಶಿಕ್ಷಣಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ವಲಯದಲ್ಲಿ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಆನ್ಲೈನ್ ಶಿಕ್ಷಣವನ್ನು ರದ್ದುಗೊಳಿಸಿ ಆದೇಶ ಹೊರಡಿಸಿತ್ತು.
ಇನ್ನು ಈ ಮಾರ್ಗಸೂಚಿಯ ಅನ್ವಯ 1 ರಿಂದ 5 ನೇ ತರಗತಿಯ ವಿದ್ಯಾರ್ಥಿಗಳಿಗೆ ವಾರದಲ್ಲಿ 3 ದಿನಗಳ ತರಗತಿ, 6 ರಿಂದ 10 ನೇ ತರಗತಿಯವರೆಗೆ ವಾರದಲ್ಲಿ 5 ದಿನ ತರಗತಿ ನಡೆಸುವಂತೆ ಸೂಚಿಸಲಾಗಿದೆ. 30 ರಿಂದ ನಲವತ್ತೈದು ನಿಮಿಷಗಳ ಕಾಲ ತರಗತಿಗಳನ್ನು ನಡೆಸುವಂತೆಯೂ ತಿಳಿಸಲಾಗಿದೆ. ಅಲ್ಲದೆ ವಾರದಲ್ಲಿ ಒಂದು ದಿನ ಪೋಷಕರ ಜೊತೆಗೆ ಸಭೆಯನ್ನು ನಡೆಸಲು ಸೂಚಿಸಲಾಗಿದೆ.
ರಾಜ್ಯದ ಉಚ್ಚ ನ್ಯಾಯಾಲಯದ ತಜ್ಞರು ವರದಿ ನೀಡುವವರೆಗೆ ಇದೇ ಕ್ರಮ ಜಾರಿಯಲ್ಲಿರಲಿದೆ ಎಂದೂ ರಾಜ್ಯ ಸರ್ಕಾರ ಸ್ಪಷ್ಟವಾಗಿ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.