ನವದೆಹಲಿ: ಭಾರತವನ್ನು ಕೆಣಕುತ್ತಿರುವ ಚೀನಾಗೆ ತಕ್ಕ ಪ್ರತ್ಯುತ್ತರವನ್ನು ಕೇಂದ್ರ ಸರ್ಕಾರ ನೀಡುತ್ತಿದೆ. ಈಗಾಗಲೇ 59 ಚೀನಾ ಅಪ್ಲಿಕೇಶನ್ಗಳನ್ನು ಭಾರತ ನಿಷೇಧ ಮಾಡಿದೆ. ಅಷ್ಟೇ ಅಲ್ಲದೇ, ಕೇಂದ್ರ ಗ್ರಾಹಕ ವ್ಯವಹಾರ, ಆರೋಗ್ಯ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯವು ಗವರ್ನ್ಮೆಂಟ್ ಇ-ಮಾರ್ಕೆಟ್ಪ್ಲೇಸ್(GeM)ನಲ್ಲಿ ಚೀನಾವಸ್ತುಗಳನ್ನು ಮಾರಾಟ ಮಾಡುವುದಕ್ಕೆ ಸಂಪೂರ್ಣ ನಿಷೇಧವನ್ನು ಹೇರಿದೆ.
ಸಚಿವ ರಾಮ್ ವಿಲಾಸ್ ಪಾಸ್ವಾನ್ ಸೋಮವಾರ ಸರ್ಕಾರದ ಇ-ಮಾರ್ಕೆಟ್ಪ್ಲೇಸ್ (GeM) ಪೋರ್ಟಲ್ನಿಂದ ‘ಮೇಡ್ ಇನ್ ಚೀನಾ’ದ ಯಾವುದೇ ವಸ್ತುಗಳನ್ನು ಖರೀದಿಸದಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ ಎಂದು ವರದಿಗಳು ತಿಳಿಸಿವೆ.
ಕಛೇರಿ ಜ್ಞಾಪಕ ಪತ್ರದ ರೂಪದಲ್ಲಿ ಹೊರಡಿಸಲಾದ ಈ ನಿರ್ದೇಶನವು ರಾಮ್ ವಿಲಾಸ್ ಪಾಸ್ವಾನ್ ನೇತೃತ್ವದ ಸಚಿವಾಲಯಗಳ ಅಡಿಯಲ್ಲಿ ಬರುವ ಸಾರ್ವಜನಿಕ ವಲಯದ ಘಟಕಗಳು ಸೇರಿದಂತೆ ಎಲ್ಲಾ ಅಧಿಕಾರಿಗಳು ಮತ್ತು ಇಲಾಖೆಗಳಿಗೆ ಅನ್ವಯಿಸುತ್ತದೆ.
ಈ ಘಟಕಗಳಲ್ಲಿ ಫುಡ್ ಕಾರ್ಪೊರೇಷನ್ ಆಫ್ ಇಂಡಿಯಾ (ಎಫ್ಸಿಐ) ಮತ್ತು ಸೆಂಟ್ರಲ್ ವೇರ್ಹೌಸಿಂಗ್ ಕಾರ್ಪೊರೇಷನ್ (ಸಿಡಬ್ಲ್ಯೂಸಿ) ಸೇರಿವೆ.
ನಿರ್ದೇಶನವು GeMನಿಂದ ಮಾತ್ರವಲ್ಲದೇ, ಮೇಡ್ ಇನ್ ಚೀನಾ ಸರಕುಗಳನ್ನು ಇತರ ಮೂಲಗಳಿಂದಲೂ ಖರೀದಿಸಬಾರದು ಎಂದು ಸ್ಪಷ್ಟವಾಗಿ ಹೇಳಿದೆ ಎಂಬುದು ಗಮನಾರ್ಹವಾಗಿದೆ.
ಒಟ್ಟಿನಲ್ಲಿ ಚೀನಾಗೆ ತಕ್ಕ ಉತ್ತರವನ್ನು ನೀಡಲು ಭಾರತ ಕಂಕಣಕಟ್ಟಿ ನಿಂತಿದ್ದು, ಸರ್ಕಾರದ ನಿರ್ಧಾರಕ್ಕೆ ಜನರು ಸಂಪೂರ್ಣ ಬೆಂಬಲವನ್ನು ನೀಡುತ್ತಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.