ನವದೆಹಲಿ: ಭಾರತದ ಮೊದಲ ಮಾನವ ಬಾಹ್ಯಾಕಾಶ ಯಾನ ʼಗಗನಯಾನʼಕ್ಕೆ ಕೊರೋನಾವೈರಸ್ ಸಾಂಕ್ರಾಮಿಕ ರೋಗ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಕೇಂದ್ರ ಬಾಹ್ಯಾಕಾಶ ಇಲಾಖೆಯ ಕೇಂದ್ರ ಸಚಿವ ಡಾ. ಜಿತೇಂದ್ರ ಸಿಂಗ್ ಸೋಮವಾರ ಹೇಳಿದ್ದಾರೆ ಎಂದು ವರದಿಗಳು ತಿಳಿಸಿವೆ.
ಗಗನಯಾನಕ್ಕೆ ಸಂಬಂಧಿಸಿದ ಸಿದ್ಧತೆಗಳನ್ನು ಸರಿಯಾದ ದಿಕ್ಕಿನಲ್ಲಿ ನಡೆಸಲಾಗುತ್ತಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಕಳೆದ ವರ್ಷದಲ್ಲಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತು ಬಾಹ್ಯಾಕಾಶ ಇಲಾಖೆಯು ಮಾಡಿದ ಪ್ರಮುಖ ಸಾಧನೆಗಳು ಮತ್ತು ಭವಿಷ್ಯಕ್ಕಾಗಿ ಯೋಜಿಸಲಾದ ಕೆಲವು ಪ್ರಮುಖ ಕಾರ್ಯಗಳ ಬಗ್ಗೆ ಸಂಕ್ಷಿಪ್ತ ಮಾಹಿತಿಯನ್ನು ನೀಡಿದ ಡಾ.ಜಿತೇಂದ್ರ ಸಿಂಗ್ ಅವರು, ಕೋವಿಡ್-19 ಸಾಂಕ್ರಾಮಿಕ ರೋಗವು ನಾಲ್ಕು ಭಾರತೀಯ ಗಗನಯಾತ್ರಿಗಳು ರಷ್ಯಾದಲ್ಲಿ ತರಬೇತಿ ಪಡೆಯುವುದಕ್ಕೆ ಅಡ್ಡಿಪಡಿಸಿರಬಹುದು, ಆದರೆ ಯೋಜನೆಗೆ ಅಡ್ಡಿಪಡಿಸಲಾರದು ಎಂದಿದ್ದಾರೆ. ಇಸ್ರೋ ಅಧ್ಯಕ್ಷ ಮತ್ತು ವಿಜ್ಞಾನಿಗಳ ತಂಡದ ಅಭಿಪ್ರಾಯ ಕೂಡ ಇದೇ ಆಗಿದೆ ಎಂದಿದ್ದಾರೆ.
ಗಗನಯಾತ್ರಿಗಳ ತರಬೇತಿಯನ್ನು ಮತ್ತೆ ಪುನರಾರಂಭಿಸಲಾಗಿದೆ ಮತ್ತು 2022ರಲ್ಲಿ ಭಾರತದ ಸ್ವಾತಂತ್ರ್ಯದ 75 ನೇ ವಾರ್ಷಿಕೋತ್ಸವದ ಮೊದಲು ಉಡಾವಣೆಯು ಯೋಜಿಸಿದಂತೆ ನಡೆಯಲಿದೆ ಎಂದು ಸಚಿವರು ಹೇಳಿದರು.
ಇಸ್ರೋ ಚಟುವಟಿಕೆಗಳಲ್ಲಿ ಖಾಸಗಿ ಪಾಲ್ಗೊಳ್ಳುವಿಕೆಯನ್ನು ಉತ್ತೇಜಿಸುವ ಸಂಪುಟದ ನಿರ್ಧಾರವನ್ನು ವಿವರಿಸಿದ ಸಚಿವರು, “ಭಾರತೀಯ ರಾಷ್ಟ್ರೀಯ ಬಾಹ್ಯಾಕಾಶ ಪ್ರಚಾರ ಮತ್ತು ಅಧಿಕಾರ ಕೇಂದ್ರ (ಐಎನ್-ಸ್ಪೇಸ್)” ಎಂಬ ನಿಯಂತ್ರಕ ಸಂಸ್ಥೆಯನ್ನು ಸ್ಥಾಪಿಸಲಾಗುವುದು ಎಂದು ಹೇಳಿದರು.
ಇದು ಖಾಸಗಿಯವರಿಗೆ ಇದು ಒಂದು ಮಟ್ಟದ ಅವಕಾಶವನ್ನು ಒದಗಿಸಲು ಸಹಾಯ ಮಾಡುತ್ತದೆ ಮತ್ತು ಅವರ ಭಾಗವಹಿಸುವಿಕೆಯನ್ನು ಉತ್ತೇಜಿಸುತ್ತದೆ ಎಂದು ಅವರು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.