News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಕೊರೋನಾ ನಿಯಂತ್ರಣಕ್ಕೆ ಸರ್ಕಾರ ಸಮರ್ಪಕ ಕ್ರಮ ತೆಗೆದುಕೊಳ್ಳುತ್ತಿದೆ: ಯಡಿಯೂರಪ್ಪ

ಬೆಂಗಳೂರು: ಕೊರೋನಾ ಕರಾಳತೆಗೆ ರಾಜ್ಯ ಬೆಚ್ಚಿ ಬಿದ್ದಿದೆ. ದಿನೇ ದಿನೇ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಕೊರೋನಾ ನಿಯಂತ್ರಣಕ್ಕೆ ಬೇಕಾದ ಪೂರಕ ಕ್ರಮಗಳನ್ನು ರಾಜ್ಯ ಸರ್ಕಾರ ಕೈಗೊಂಡಿದ್ದು, ಜನರು ಭಯಭೀತರಾಗುವುದು ಬೇಡ ಎಂದು ಸಿಎಂ ಯಡಿಯೂರಪ್ಪ ಅವರು ಭರವಸೆ ನೀಡಿದ್ದಾರೆ.

“ಇತರ ರಾಜ್ಯಗಳಿಗೆ ಹೋಲಿಸಿದರೆ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಕಡಿಮೆ ಇದೆ. ಈಗಾಗಲೇ ಖಾಸಗಿ ಆಸ್ಪತ್ರೆಗಳ ಜೊತೆಗೂ ಮಾತುಕತೆ ನಡೆಸಿ ಕೊರೋನಾ ಚಿಕಿತ್ಸೆಗೆ ಬೇಕಾದ ಬೆಡ್ ಗಳನ್ನು ಕಾಯ್ದಿರಿಸಲಾಗಿದೆ. ಸುಮಾರು 2,500 ಬೆಡ್‌ಗಳನ್ನು ಕೊರೋನಾ ಸೋಂಕಿತರ ಚಿಕಿತ್ಸೆಗೆ ನೀಡುವುದಾಗಿಯೂ ಖಾಸಗಿ ಆಸ್ಪತ್ರೆಗಳು ಒಪ್ಪಿಕೊಂಡಿವೆ. ಕೊರೋನಾ ಚಿಕಿತ್ಸೆ ಮತ್ತು ನಿಯಂತ್ರಣಕ್ಕೆ ಬೇಕಾದ ಎಲ್ಲಾ ಕ್ರಮಗಳನ್ನು ಸರ್ಕಾರ ಕೈಗೊಳ್ಳುತ್ತಿದ್ದು, ಜನರು ಧೈರ್ಯದಿಂದ ಇರಬೇಕು” ಎಂದು ಸಿಎಂ ಹೇಳಿದ್ದಾರೆ.

ಈ ವರೆಗೆ ಬೆಂಗಳೂರಿನಲ್ಲಿ 3,321 ಕೊರೋನಾ ಪಾಸಿಟಿವ್ ಕೇಸ್ ಗಳು ಪತ್ತೆಯಾಗಿದ್ದು, ಅವುಗಳಲ್ಲಿ 433 ಮಂದಿ ಚೇತರಿಸಿಕೊಂಡಿದ್ದಾರೆ. 81 ಸಾವುಗಳು ಸಂಭವಿಸಿರುವುದಾಗಿಯೂ ಯಡಿಯೂರಪ್ಪ ತಿಳಿಸಿದ್ದಾರೆ. ಈ ಅಂಕಿಅಂಶ ಇತರ ನಗರಗಳಿಗೆ ಹೋಲಿಸಿದರೆ ಬೆಂಗಳೂರು ಪರಿಣಾಮಕಾರಿಯಾಗಿ ಕೊರೋನಾ ವಿರುದ್ಧ ಹೋರಾಡುತ್ತಿದೆ ಎಂಬುದನ್ನು ಸ್ಪಷ್ಟಪಡಿಸುತ್ತದೆ ಎಂದು ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top