ನವದೆಹಲಿ: ಕೊರೋನಾ ದೇಶದಲ್ಲಿ ತನ್ನ ಕರಾಳತೆಯನ್ನು ಪ್ರದರ್ಶಿಸುತ್ತಿರುವ ನಡುವೆಯೂ ತುಸು ನಿರಾಳವಾಗುವ ವಿಚಾರವನ್ನು ಕೇಂದ್ರ ಆರೋಗ್ಯ ಸಚಿವಾಲಯ ಬಹಿರಂಗಪಡಿಸಿದೆ. ಕೊರೋನಾ ಸೋಂಕಿನಿಂದ ಗುಣಮುಖರಾಗುವವರ ಪ್ರಮಾಣ 58.67% ದಷ್ಟು ಹೆಚ್ಚಾಗಿರುವುದಾಗಿ ಸಚಿವಾಲಯ ಮಾಹಿತಿ ನೀಡಿದೆ. , 2,10,120 ರಷ್ಟು ಕೊರೋನಾ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬುದಾಗಿಯೂ ಸಚಿವಾಲಯ ತನ್ನ ವರದಿಯಲ್ಲಿ ಮಾಹಿತಿ ನೀಡಿದೆ.
ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 12010 ಕೊರೋನಾ ರೋಗಿಗಳು ಗುಣಮುಖರಾಗಿದ್ದಾರೆ. ಈ ವರೆಗೆ ದೇಶದಲ್ಲಿ 548318 ಕೊರೋನಾ ಸೋಂಕಿತರ ಸಂಖ್ಯೆ ಧೃಢಪಟ್ಟಿದ್ದು, 2,10,120 ಮಂದಿ ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ. 3,21,723 ಮಂದಿ ಚೇತರಿಸಿಕೊಂಡಿದ್ದು, 16475 ಮಂದಿ ಮೃತಪಟ್ಟಿದ್ದಾರೆ ಎಂದೂ ಆರೋಗ್ಯ ಸಚಿವಾಲಯ ಅಂಕಿ ಅಂಶಗಳನ್ನು ನೀಡಿದೆ. ಆ ಮೂಲಕ ಸುಮಾರು 58.67% ರಷ್ಟು ಪ್ರಮಾಣದಲ್ಲಿ ದೇಶದಲ್ಲಿ ಕೊರೋನಾ ಸೋಂಕಿತರು ಗುಣಮುಖರಾಗಿದ್ದು, ಚೇತರಿಕೆಯ ಸಂಖ್ಯೆಯಲ್ಲಿ ಏರಿಕೆಯಾಗಿದೆ ಎಂದೂ ವರದಿ ಹೇಳಿದೆ.
ಕಳೆದ 24 ಗಂಟೆಗಳಲ್ಲಿ 18,522 ಹೊಸ ಪ್ರಕರಣಗಳು ದಾಖಲಾಗಿದ್ದು, 418 ಜನರು ಮೃತರಾಗಿದ್ದಾರೆ. ಸದ್ಯ ಮಹಾರಾಷ್ಟ್ರ ದಲ್ಲಿ 1,69,833 ರಷ್ಟು ಕೊರೋನಾ ಪ್ರಕರಣಗಳು ದಾಖಲಾಗಿದ್ದು, 88,960 ಮಂದಿ ಗುಣಮುಖರಾಗಿದ್ದರೆ, 7610 ಮಂದಿ ಮೃತಪಟ್ಟಿದ್ದಾರೆ. ದೆಹಲಿಯಲ್ಲಿ 85161 ಸೋಂಕಿತರಲ್ಲಿ 22246 ಮಂದಿಗೆ ಚಿಕಿತ್ಸೆ ನಡೆಯುತ್ತಿದೆ. 56235 ಮಂದಿ ಗುಣಮುಖರಾಗಿದ್ದು, 2680 ಮಂದಿ ಸಾವನ್ನಪ್ಪಿದ್ದಾರೆ. ಗುಜರಾತ್ ನಲ್ಲಿ 1827, ತಮಿಳುನಾಡು-1141 ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.