ವಾಷಿಂಗ್ಟನ್: ಭಯೋತ್ಪಾದನೆಯ ವಿರುದ್ಧ ಭಾರತ ಮತ್ತು ಅಮೆರಿಕಾ ಜೊತೆಯಾಗಿ ಹೋರಾಟ ಮಾಡುತ್ತಿದ್ದು, ಇದಕ್ಕೆ ಅಮೆರಿಕಾದ ಸಂಸದ ಜಾನ್ ಕಾರ್ಟರ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಜೊತೆಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕಾದ ಜೊತೆಗೆ ಸ್ನೇಹ ಸಂಬಂಧವನ್ನು ಹೊಂದಿರುವುದಕ್ಕೆ ಸಂತಸ ವ್ಯಕ್ತಪಡಿಸಿ,ಕೃತಜ್ಞತೆ ತಿಳಿಸಿದ್ದಾರೆ.
ಅಮೆರಿಕಾದ ಜನಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದ ಕಾರ್ಟರ್, ಭಯೋತ್ಪಾದಕ ಕೃತ್ಯಗಳ ವಿಚಾರದಲ್ಲಿ ಉಭಯ ದೇಶಗಳು ಹೋರಾಟ ನಡೆಸುತ್ತಿವೆ. ಪರಸ್ಪರ ಸಹಕಾರ ನೀಡುವ ಮೂಲಕ ಉಗ್ರವಾದದ ದಮನಕ್ಕೆ ಪ್ರಯತ್ನ ನಡೆಸುತ್ತಿರುವುದಾಗಿಯೂ ಅವರು ಹೇಳಿದ್ದಾರೆ. ಜೊತೆಗೆ ಭಾರತ ಮತ್ತು ಅಮೆರಿಕಾ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧವೂ ಚೆನ್ನಾಗಿದ್ದು, ಪ್ರಜಾತಂತ್ರಕ್ಕೆ ಪೂರಕವಾಗಿಯೇ ಎರಡೂ ರಾಷ್ಟ್ರಗಳು ಒಮ್ಮತದಿಂದ ಕಾರ್ಯ ನಿರ್ವಹಿಸುತ್ತಿದೆ ಎಂದಿದ್ದಾರೆ.
ಇನ್ನು ಕಳೆದ ಬಾರಿ ಟ್ರಂಪ್ ಅವರು ಭಾರತಕ್ಕೆ ಆಗಮಿಸಿದ ಸಂದರ್ಭದಲ್ಲಿ ಅವರಿಗೆ ಭಾರತೀಯರಿಂದ ಅದ್ಭುತ ಸ್ವಾಗತ ಸಿಕ್ಕಿತ್ತು. ಈ ಸಂದರ್ಭದಲ್ಲಿ ರಕ್ಷಣಾ ವಲಯ ಸೇರಿದಂತೆ ಇತರ ಅಭಿವೃದ್ಧಿ ಕೆಲಸಗಳಿಗೆ ಸಹಕರಿಸುವ ಭರವಸೆಯನ್ನೂ ನೀಡಿದ್ದರು ಎಂಬುದನ್ನೂ ಕಾರ್ಟರ್ ಅವರು ಈ ಸಂದರ್ಭದಲ್ಲಿ ನೆನಪಿಸಿಕೊಂಡರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.