ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸುತ್ತಿರುವ ಭಾರತೀಯ ಭದ್ರತಾ ಪಡೆಗಳು ರಜೌರಿ ಗಡಿ ನಿಯಂತ್ರಣ ರೇಖೆಯ ಬಳಿ ಪಾಕಿಸ್ಥಾನ ಮೂಲದ ಉಗ್ರಗಾಮಿಯೊಬ್ಬನನ್ನು ಗುಂಡಿಕ್ಕಿ ಸಂಹರಿಸಿದೆ.
ನಿಯಮಗಳನ್ನು ಉಲ್ಲಂಘನೆ ಮಾಡಿ ಅಕ್ರಮವಾಗಿ ಗಡಿಯೊಳಕ್ಕೆ ನುಸುಳಲು ಪ್ರಯತ್ನಿಸುತ್ತಿದ್ದ ಸಂದರ್ಭದಲ್ಲಿ ಭದ್ರತಾ ಪಡೆಗಳು ದಾಳಿ ನಡೆಸಿ, ಉಗ್ರನನ್ನು ಯಮಪುರಿಗೆ ಅಟ್ಟಿವೆ. ರಜೌರಿಯ ಕೇರಿ ಸೆಕ್ಟರ್ನಲ್ಲಿ ಪಾಕಿಸ್ಥಾನ ಪ್ರೇರಿತ ಉಗ್ರಗಾಮಿಗಳ ಗುಂಪು ಒಳ ನುಸುಳಲು ಪ್ರಯತ್ನ ಮಾಡುವ ವೇಳೆ ಭದ್ರತಾ ಪಡೆ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಈ ಸಂದರ್ಭದಲ್ಲಿ ಉಗ್ರ ಹತನಾಗಿದ್ದಾನೆ ಎಂದು ಮೂಲಗಳು ಮಾಹಿತಿ ನೀಡಿದೆ.
ಕಾರ್ಯಾಚರಣೆ ನಡೆಸಿದ ಸ್ಥಳದಿಂದ ಎಕೆ 47 ಬಂದೂಕು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ ಮುಂದುವರಿಸಲಾಗಿದ್ದು, ಅವಿತುಕೊಂಡಿರುವ ಇತರ ನುಸುಳುಕೋರ ಉಗ್ರರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಭದ್ರತಾ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.
ಜಮ್ಮು-ಕಾಶ್ಮೀರದಲ್ಲಿ 370ನೇ ವಿಧಿಯನ್ನು ರದ್ದುಗೊಳಿಸಿದ ಬಳಿಕ ಪಾಕಿಸ್ಥಾನವು ಅಲ್ಲಿ ಭಯೋತ್ಪಾದನಾ ಚಟುವಟಿಕೆಗಳನ್ನು ಹೆಚ್ಚಿಸಲು ಹಾತೊರೆಯುತ್ತಿದೆ. ಇದಕ್ಕಾಗಿ ಉಗ್ರರನ್ನು ಒಳನುಸುಳಿಸಲು ಪ್ರಯತ್ನಿಸುತ್ತಿದೆ. ಆದರೆ ಭಾರತೀಯ ಯೋಧರು ಒಳನುಸುಳುತ್ತಿರುವ ಉಗ್ರರನ್ನು ಸಂಹರಿಸುವ ಕಾರ್ಯವನ್ನು ಅಚ್ಚುಕಟ್ಟಾಗಿ ಮಾಡುತ್ತಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.