ಇಸ್ಲಾಮಾಬಾದ್: ಪಾಕಿಸ್ಥಾನದ ಸಿಂಧ್ ಪ್ರಾಂತ್ಯದಲ್ಲಿ ಮತ್ತೊಂದು ಆಘಾತಕಾರಿ ಬೆಳವಣಿಗೆ ನಡೆದಿದೆ, ಅಲ್ಲಿನ ಬದಿನ್ ಜಿಲ್ಲೆಯಲ್ಲಿ 102 ಹಿಂದೂಗಳನ್ನು ಬಲವಂತವಾಗಿ ಇಸ್ಲಾಂಗೆ ಮತಾಂತರ ಮಾಡಲಾಗಿದೆ ಮತ್ತು ದೇಗುಲವನ್ನು ಮಸೀದಿಯಾಗಿ ಪರಿವರ್ತಿಸಲಾಗಿದೆ ಎಂದು ವರದಿಗಳು ತಿಳಿಸಿವೆ.
ವರದಿಗಳ ಪ್ರಕಾರ, ಪಾಕಿಸ್ಥಾನದ ಸಿಂಧ್ ಪ್ರಾಂತ್ಯದ ಬದಿನ್ ಜಿಲ್ಲೆಯ ವ್ಯಾಪ್ತಿಗೆ ಬರುವ ಗೋಲಾರ್ಚಿಯಲ್ಲಿ 102 ಹಿಂದೂ ಪುರುಷರು, ಮಹಿಳೆಯರು ಮತ್ತು ಮಕ್ಕಳನ್ನು ಇಸ್ಲಾಂಗೆ ಮತಾಂತರಗೊಳಿಸಲಾಗಿತು. ಸ್ಥಳೀಯ ದೇವಾಲಯವೊಂದರಲ್ಲಿ ಇರಿಸಲಾಗಿದ್ದ ಹಿಂದೂ ದೇವರುಗಳ ಎಲ್ಲಾ ವಿಗ್ರಹಗಳನ್ನು ನಾಶಪಡಿಸಲಾಯಿತು ಮತ್ತು ಆವರಣವನ್ನು ಮಸೀದಿಯಾಗಿ ಪರಿವರ್ತಿಸಲಾಯಿತು.
ಮೇ 17 ರಂದು ಸಿಂಧ್ ಪ್ರಾಂತ್ಯದ ಹಿಂದೂಗಳು, ತಬ್ಲೀಘಿ ಜಮಾಅತ್ ತಮ್ಮನ್ನು ಹಿಂಸಿಸುತ್ತಿದೆ, ನಮ್ಮ ಮನೆಗಳನ್ನು ಧ್ವಂಸ ಮಾಡುತ್ತಿದೆ ಮತ್ತು ಇಸ್ಲಾಂಗೆ ಮತಾಂತರಗೊಳ್ಳಲು ನಿರಾಕರಿಸಿದ್ದಕ್ಕಾಗಿ ಹಿಂದೂ ಹುಡುಗನನ್ನು ಅಪಹರಿಸಿದೆ ಎಂದು ಅವಲತ್ತುಕೊಂಡಿದ್ದರು.
ಬಲವಂತ ಮತಾಂತರದ ವಿರುದ್ಧ ಭೀಲ್ ಹಿಂದೂಗಳು ಮಾಟಿಯಾರ್ನ ನಾಸೂರ್ ಪುರ್ನಲ್ಲಿ ಪ್ರತಿಭಟನೆ ನಡೆಸುತ್ತಿರುವುದನ್ನು ತೋರಿಸುವ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
“ನಾವು ಸಾಯಲು ಆದ್ಯತೆ ನೀಡುತ್ತೇವೆ ಆದರೆ ಎಂದಿಗೂ ಇಸ್ಲಾಂಗೆ ಮತಾಂತರಗೊಳ್ಳುವುದಿಲ್ಲ” ಎಂದು ಮಹಿಳೆಯರು ಮತ್ತು ಮಕ್ಕಳು ಕೈಯಲ್ಲಿ ಬರೆದ ಪೋಸ್ಟರ್ಗಳನ್ನು ಹಿಡಿದುಕೊಂಡಿದ್ದರು.
ಪ್ರತಿಭಟನಾಕಾರರ ಪರವಾಗಿ ಮಾತನಾಡಿದ ಮಹಿಳೆಯೊಬ್ಬರು, ನಮ್ಮನ್ನು ಥಳಿಸಲಾಯಿತು, ನಮ್ಮ ಆಸ್ತಿಗಳನ್ನು ಬಲವಂತವಾಗಿ ಕಸಿದುಕೊಂಡು ಮನೆಗಳನ್ನು ನಾಶ ಮಾಡಲಾಯಿತು ಎಂದು ಆರೋಪಿಸಿದ್ದಾರೆ. ಮನೆಗಳನ್ನು ಮರಳಿ ಪಡೆಯಲು ಬಯಸುವುದಾರೆ ಇಸ್ಲಾಂಗೆ ಮತಾಂತರಗೊಳ್ಳಿ ಎಂದು ಬೆದರಿಕೆಯನ್ನೂ ಹಾಕಲಾಗಿದೆ ಎಂದಿದ್ದಾರೆ.
ಹಿಂದೂಗಳು ಮತ್ತು ಕ್ರಿಶ್ಚಿಯನ್ನರನ್ನು ಕಿರುಕುಳಕ್ಕೆ ಒಳಪಡಿಸಲಾಗುತ್ತಿರುವ ಸುದ್ದಿಗಳು ಪಾಕಿಸ್ಥಾನದ ಸಿಂಧ್ ಮತ್ತು ಪಂಜಾಬ್ ಪ್ರಾಂತ್ಯಗಳಿಂದ ನಿರಂತರವಾಗಿ ಕೇಳಿ ಬರುತ್ತಲೇ ಇರುತ್ತದೆ. ಈ ವರ್ಷದ ಆರಂಭದಲ್ಲಿ ಪಾಕಿಸ್ಥಾನದ ಮಾನವ ಹಕ್ಕುಗಳ ಆಯೋಗವು (ಎಚ್ಆರ್ಸಿಪಿ) “ಅಲ್ಪಸಂಖ್ಯಾತ ಸಮುದಾಯಗಳ ಮೇಲೆ ಭಯಾನಕವಾಗಿ ಧಾರ್ಮಿಕ ಪ್ರೇರಿತ ದಾಳಿಗಳು ನಡೆದಿವೆ ಮತ್ತು ಹಿಂಸೆ, ಪೂರ್ವಾಗ್ರಹಗಳು ಮತ್ತು ಅಸಮಾನತೆಗಳನ್ನು ನಿರ್ಮೂಲನೆ ಮಾಡುವ ಯಾವುದೇ ಪ್ರಯತ್ನಗಳು ಸರ್ಕಾರದಿಂದ ನಡೆಯುತ್ತಲೇ ಇಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.