ನವದೆಹಲಿ: 59 ಚೀನಾದ ಆ್ಯಪ್ಗಳ ಮೇಲೆ ನಿಷೇಧವನ್ನು ಹೇರಿರುವುದು ಭಾರತದ ಸಾರ್ವಭೌಮತ್ವ, ಸಮಗ್ರತೆ ಮತ್ತು ರಾಷ್ಟ್ರೀಯ ಭದ್ರತೆಯನ್ನು ಉತ್ತೇಜಿಸಲಿದೆ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮೈಕ್ ಪೊಂಪಿಯೊ ಬುಧವಾರ ಹೇಳಿದ್ದಾರೆ. ಲಡಾಖ್ನ ಗಾಲ್ವಾನ್ ಕಣಿವೆಯಲ್ಲಿ ನಡೆಯುತ್ತಿರುವ ಭಾರತ ಮತ್ತು ಚೀನಾ ನಡುವಿನ ಭಿನ್ನಾಭಿಪ್ರಾಯದ ಹಿನ್ನೆಲೆಯಲ್ಲಿ ಅಮೆರಿಕಾ ಭಾರತದ ಕ್ರಮವನ್ನು ಸ್ವಾಗತಿಸಿದೆ.
ವರದಿಗಳ ಪ್ರಕಾರ, “ಚೀನೀ ಕಮ್ಯೂನಿಸ್ಟ್ ಪಾರ್ಟಿಗೆ ಪರೋಕ್ಷ ಬೆಂಬಲವಾಗಿ ಕಾರ್ಯನಿರ್ವಹಿಸುವ ಕೆಲವು ಮೊಬೈಲ್ ಅಪ್ಲಿಕೇಶನ್ಗಳ ಮೇಲೆ ಭಾರತ ವಿಧಿಸಿರುವ ನಿಷೇಧವನ್ನು ನಾವು ಸ್ವಾಗತಿಸುತ್ತೇವೆ” ಎಂದು ಪೊಂಪಿಯೊ ಸುದ್ದಿಗಾರರಿಗೆ ತಿಳಿಸಿದ್ದಾರೆ.
“ಭಾರತದ ಕ್ಲೀನ್ ಆ್ಯಪ್ ವಿಧಾನವು ಭಾರತದ ಸಾರ್ವಭೌಮತ್ವವನ್ನು ಹೆಚ್ಚಿಸುತ್ತದೆ. ಇದು ಭಾರತದ ಸಮಗ್ರತೆ ಮತ್ತು ರಾಷ್ಟ್ರೀಯ ಭದ್ರತೆಯನ್ನು ಉತ್ತೇಜಿಸುತ್ತದೆ” ಎಂದು ಹೇಳಿದ್ದಾರೆ.
ಜೂನ್ 15 ರಂದು ಲಡಾಖ್ನಲ್ಲಿ ನಡೆದ ಘರ್ಷಣೆಯ ನಂತರ ಚೀನಾಗೆ ಆರ್ಥಿಕ ಹೊಡೆತವನ್ನು ನೀಡಲು ಭಾರತ ಮುಂದಾಗಿದೆ. ಮೊಬೈಲ್ ಅಪ್ಲಿಕೇಶನ್ಗಳಲ್ಲಿ ಭಾರಿ ಜನಪ್ರಿಯ ಪಡೆದ ಟಿಕ್ಟಾಕ್, ವೀಚಾಟ್ ಮತ್ತು ಯುಸಿ ಬ್ರೌಸರ್ ಸೇರಿದಂತೆ 59 ಆಪ್ ಅನ್ನು ನಿಷೇಧಿಸಿದೆ.
“ಲಭ್ಯವಿರುವ ಮಾಹಿತಿಯ ಪ್ರಕಾರ ಈ ಅಪ್ಲಿಕೇಶನ್ಗಳು ಭಾರತದ ಸಾರ್ವಭೌಮತ್ವ ಮತ್ತು ಸಮಗ್ರತೆ, ಭಾರತದ ರಕ್ಷಣೆ, ರಾಜ್ಯದ ಸುರಕ್ಷತೆ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ತರುವ ಪೂರ್ವಾಗ್ರಹ ಪೀಡಿತ ಚಟುವಟಿಕೆಗಳಲ್ಲಿ ತೊಡಗಿದೆ” ಎಂದು ಸರ್ಕಾರ ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.