ನವದೆಹಲಿ: ದೇಶದಲ್ಲಿ ಕೊರೋನಾ ಮಹಾಮಾರಿಯ ಅಟ್ಟಹಾಸ ಹೆಚ್ಚಾಗುತ್ತಿರುವ ಬೆನ್ನಲ್ಲೇ ಕೇಂದ್ರ ಆರೋಗ್ಯ ಸಚಿವಾಲಯ ಕೊಂಚ ಮಟ್ಟಿನ ರಿಲೀಫ್ ಆಗುವ ವರದಿಯೊಂದನ್ನು ಬಿಡುಗಡೆ ಮಾಡಿದೆ.
ಕೊರೋನಾ ಸೋಂಕಿತರು ಗುಣಮುಖರಾಗುತ್ತಿರುವ ಪ್ರಮಾಣದ ಕುರಿತ ವರದಿಯನ್ನು ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿದ್ದು, ಈ ವರೆಗೆ 59.43%ರಷ್ಟು ರೋಗಿಗಳು ಚೇತರಿಸಿಕೊಂಡಿದ್ದಾರೆ ಎಂದು ತಿಳಿಸಿದೆ. ದೇಶದಲ್ಲಿ ಕಳೆದ 24 ಗಂಟೆಯಲ್ಲಿ 13,157 ಮಂದಿ ಸೋಂಕಿತರು ಚೇತರಿಸಿಕೊಂಡಿದ್ದಾರೆ ಎಂಬುದಾಗಿಯೂ ವರದಿ ತಿಳಿಸಿದೆ. ಪ್ರಸ್ತುತ ದೇಶದಲ್ಲಿ 2,20,114 ಸಕ್ರಿಯ ಸೋಂಕಿತರಿದ್ದು, ಚಿಕಿತ್ಸೆ ಪಡೆಯುತ್ತಿರುವುದಾಗಿಯೂ ಈ ವರದಿಯಲ್ಲಿ ತಿಳಿಸಲಾಗಿದೆ.
ಇನ್ನು ಕೊರೋನಾ ನಿಯಂತ್ರಣ ವಿಚಾರದಲ್ಲಿ ಕೇಂದ್ರ, ರಾಜ್ಯ ಸರ್ಕಾರಗಳು ಜೊತೆಯಾಗಿ ಕಾರ್ಯ ನಿರ್ವಹಿಸುತ್ತಿವೆ. ಈ ಸಂಘಟಿತ ಪ್ರಯತ್ನಗಳ ಫಲವಾಗಿ ಈ ವರೆಗೆ ದೇಶದಲ್ಲಿ 1,27,864 ಸೋಂಕಿತರು ಚೇತರಿಸಿಕೊಂಡು ಗುಣಮುಖರಾಗಿದ್ದಾರೆ ಎಂದೂ ವರದಿ ಹೇಳಿದೆ. ಕೊರೋನಾ ಟೆಸ್ಟಿಂಗ್ ಲ್ಯಾಬ್ ಗಳೂ ಹೆಚ್ಚು ಸಮರ್ಥವಾಗಿ ಕಾರ್ಯ ನಿರ್ವಹಿಸುತ್ತಿದ್ದು, ಇದರಿಂದಾಗಿ ಹೆಚ್ಚು ಜನರು ಆರೋಗ್ಯ ಕಾಳಜಿ ವಹಿಸುವುದು ಸಾಧ್ಯವಾಗಿದೆ ಎಂದೂ ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ದೇಶದಲ್ಲಿ ಒಟ್ಟು 764 ಸರ್ಕಾರಿ ಲ್ಯಾಬ್ ಗಳು ಮತ್ತು 294 ಖಾಸಗಿ ಲ್ಯಾಬ್ ಗಳಿದ್ದು, ಕೊರೋನಾ ಪರೀಕ್ಷೆ ನಡೆಸುತ್ತಿವೆ. ಕಳೆದ 24 ಗಂಟೆಗಳಲ್ಲಿ 2,17,931 ಕೊರೋನಾ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದೂ ಆರೋಗ್ಯ ಸಚಿವಾಲಯ ತನ್ನ ವರದಿಯಲ್ಲಿ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.