ನವದೆಹಲಿ: ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ಐಸಿಎಂಆರ್) ಗುರುವಾರ ಭಾರತ್ ಬಯೋಟೆಕ್ ಇಂಟರ್ನ್ಯಾಷನಲ್ ಲಿಮಿಟೆಡ್ (ಬಿಬಿಐಎಲ್)ನೊಂದಿಗೆ ಸಹಭಾಗಿತ್ವದಲ್ಲಿ ದೇಶೀಯ ಕೋವಿಡ್-19 ಲಸಿಕೆ (BBV152 COVID Vaccine)) ಯ ಕ್ಲಿನಿಕಲ್ ಪ್ರಯೋಗಗಳನ್ನು ತ್ವರಿತಗತಿಯಲ್ಲಿ ನಡೆಸುವತ್ತ ಕಾರ್ಯೋನ್ಮುಖಗೊಂಡಿದೆ.
ಅಧಿಕೃತ ಹೇಳಿಕೆಯ ಪ್ರಕಾರ, ಐಸಿಎಂಆರ್ ಮಹಾನಿರ್ದೇಶಕ ಬಲರಾಮ್ ಭಾರ್ಗವ ಅವರು ಆಗಸ್ಟ್ 15ರೊಳಗೆ ದೇಶೀಯ ಕೋವಿಡ್ -19 ಲಸಿಕೆಯನ್ನು ಬಿಡುಗಡೆ ಮಾಡುವ ಗುರಿ ಹೊಂದಿದ್ದಾರೆ ಎಂದು ಹೇಳಿದ್ದಾರೆ.
“ಎಲ್ಲಾ ಕ್ಲಿನಿಕಲ್ ಪ್ರಯೋಗಗಳು ಪೂರ್ಣಗೊಂಡ ನಂತರ 2020ರ ಆಗಸ್ಟ್15 ರೊಳಗೆ ಸಾರ್ವಜನಿಕ ಆರೋಗ್ಯ ಬಳಕೆಗಾಗಿ ಲಸಿಕೆಯನ್ನು ಬಿಡುಗಡೆ ಮಾಡಲು ಉದ್ದೇಶಿಸಲಾಗಿದೆ. ಗುರಿಯನ್ನು ಪೂರೈಸಲು ಬಿಬಿಐಎಲ್ ತ್ವರಿತವಾಗಿ ಕಾರ್ಯನಿರ್ವಹಿಸುತ್ತಿದೆ, ಆದರೂ, ಅಂತಿಮ ಫಲಿತಾಂಶವು ಇದರಲ್ಲಿ ಒಳಗೊಂಡಿರುವ ಎಲ್ಲಾ ಕ್ಲಿನಿಕಲ್ ಟ್ರಯಲ್ ಸೈಟ್ಗಳ ಸಹಕಾರವನ್ನು ಅವಲಂಬಿಸಿರುತ್ತದೆ” ಎಂದು ಹೇಳಿಕೆ ತಿಳಿಸಿದೆ.
“ಇದು ಭಾರತವು ಅಭಿವೃದ್ಧಿಪಡಿಸಿದ ಮೊದಲ ದೇಶೀಯ ಲಸಿಕೆ ಮತ್ತು ಇದು ಸರ್ಕಾರವು ಉನ್ನತ ಮಟ್ಟದಲ್ಲಿ ಮೇಲ್ವಿಚಾರಣೆ ನಡೆಸುತ್ತಿರುವ ಪ್ರಮುಖ ಆದ್ಯತೆಯ ಯೋಜನೆಗಳಲ್ಲಿ ಒಂದಾಗಿದೆ. ಐಸಿಎಂಆರ್-ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿಯಿಂದ ಪ್ರತ್ಯೇಕಿಸಲ್ಪಟ್ಟ SARS-CoV-2 ನ ಸ್ಟ್ರೇನ್ನಿಂದ ಲಸಿಕೆಯನ್ನು ತಯಾರಿಸಲಾಗಿದೆ. ಐಸಿಎಂಆರ್ ಮತ್ತು ಬಿಬಿಐಎಲ್ ಈ ಲಸಿಕೆಯ ಪೂರ್ವಭಾವಿ ಮತ್ತು ವೈದ್ಯಕೀಯ ಅಭಿವೃದ್ಧಿಗೆ ಜಂಟಿಯಾಗಿ ಕಾರ್ಯನಿರ್ವಹಿಸುತ್ತಿವೆ “ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.