
ನವದೆಹಲಿ: ಭಾರತದ ಜನ ಸಂಘದ ಸಂಸ್ಥಾಪಕ ಶ್ಯಾಮಾ ಪ್ರಸಾದ್ ಮುಖರ್ಜಿ ಅವರ ಜನ್ಮ ದಿನಾಚರಣೆಯನ್ನು ಇಂದು ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಅವರಿಗೆ ಗೌರವ ಸಲ್ಲಿಸಿದರು ಮತ್ತು ಭಾರತದ ಐಕ್ಯತೆಯನ್ನು ಮತ್ತಷ್ಟು ಹೆಚ್ಚಿಸಲು ಅವರ ಧೈರ್ಯಶಾಲಿ ಪ್ರಯತ್ನಗಳನ್ನು ಸ್ಮರಿಸಿ ಕೊಂಡಾಡಿದರು.
ಟ್ವಿಟ್ ಮಾಡಿರುವ ಮೋದಿ, ಶ್ಯಾಮಾ ಪ್ರಸಾದ್ ಮುಖರ್ಜಿಯವರನ್ನು ನಿಷ್ಠಾವಂತ ದೇಶಭಕ್ತ ಮತ್ತು ಭಾರತದ ಅಭಿವೃದ್ಧಿಗೆ ಅವರು ಅನುಕರಣೀಯ ಕೊಡುಗೆಗಳನ್ನು ನೀಡಿದ್ದಾರೆ ಎಂದು ಹೇಳಿದ್ದಾರೆ.
“ನಾನು ಜಯಂತಿಯಂದು ಡಾ. ಶ್ಯಾಮಾ ಪ್ರಸಾದ್ ಮುಖರ್ಜಿ ಅವರಿಗೆ ನಮಸ್ಕರಿಸುತ್ತೇನೆ. ನಿಷ್ಠಾವಂತ ದೇಶಭಕ್ತ, ಅವರು ಭಾರತದ ಅಭಿವೃದ್ಧಿಗೆ ಅನುಕರಣೀಯ ಕೊಡುಗೆಗಳನ್ನು ನೀಡಿದರು. ಭಾರತದ ಐಕ್ಯತೆಯನ್ನು ಹೆಚ್ಚಿಸಲು ಅವರು ಧೈರ್ಯಶಾಲಿ ಪ್ರಯತ್ನಗಳನ್ನು ಮಾಡಿದರು. ಅವರ ಆಲೋಚನೆಗಳು ಮತ್ತು ಆದರ್ಶಗಳು ರಾಷ್ಟ್ರದಾದ್ಯಂತ ಲಕ್ಷಾಂತರ ಜನರಿಗೆ ಬಲವನ್ನು ನೀಡುತ್ತವೆ” ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.
ಮುಖರ್ಜಿ ಜುಲೈ 6, 1901 ರಂದು ಕೋಲ್ಕತ್ತಾದಲ್ಲಿ ಜನಿಸಿದರು. ಅವರು ಪ್ರಧಾನಿ ಜವಾಹರಲಾಲ್ ನೆಹರೂ ಅವರ ಸಂಪುಟದಲ್ಲಿ ಕೈಗಾರಿಕೆ ಮತ್ತು ಸರಬರಾಜು ಸಚಿವರಾಗಿದ್ದರು ಆದರೆ ನಂತರ ಅವರು ನೆಹರೂ ಅವರ ಸಂಪುಟಕ್ಕೆ ರಾಜೀನಾಮೆ ನೀಡಿದರು. ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಸಹಾಯದಿಂದ ಅವರು ಭಾರತೀಯ ಜನ ಸಂಘವನ್ನು 1951ರಲ್ಲಿ ಸ್ಥಾಪಿಸಿದರು.
ಅವರು 1943 ರಿಂದ 1946 ರವರೆಗೆ ಅಖಿಲ್ ಭಾರತೀಯ ಹಿಂದೂ ಮಹಾಸಭಾ ಅಧ್ಯಕ್ಷರಾಗಿದ್ದರು. ಭಾರತೀಯ ಜನತಾ ಪಕ್ಷವು ಭಾರತೀಯ ಜನ ಸಂಘದಿಂದ ಜನ್ಮ ತಾಳಿದ ಕಾರಣ, ಮುಖರ್ಜಿ ಅವರನ್ನು ಭಾರತೀಯ ಜನತಾ ಪಕ್ಷದ ಸ್ಥಾಪಕರೆಂದು ಪರಿಗಣಿಸಲಾಗಿದೆ. ಅವರು ಜೂನ್ 23, 1953 ರಂದು ಕೊನೆಯುಸಿರೆಳೆದರು.
I bow to Dr. Syama Prasad Mookerjee on his Jayanti. A devout patriot, he made exemplary contributions towards India’s development. He made courageous efforts to further India’s unity. His thoughts and ideals give strength to millions across the nation.
— Narendra Modi (@narendramodi) July 6, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.


