ನವದೆಹಲಿ: ಏರ್ ಇಂಡಿಯಾ ಜುಲೈ 11ರಿಂದ ವಂದೇ ಭಾರತ್ ಮಿಷನ್ ಅಡಿಯಲ್ಲಿ ಭಾರತ, ಯುಎಸ್ ನಡುವೆ 36 ವಿಮಾನಗಳನ್ನು ನಿರ್ವಹಿಸಲಿದೆ ಎಂದು ವರದಿಗಳು ತಿಳಿಸಿವೆ.
ವಂದೇ ಭಾರತ್ ಮಿಷನ್ ಅಡಿಯಲ್ಲಿ ಜುಲೈ 11 ರಿಂದ ಜುಲೈ 19 ರವರೆಗೆ ಏರ್ ಇಂಡಿಯಾ ಯುನೈಟೆಡ್ ಸ್ಟೇಟ್ಸ್ ಮತ್ತು ಭಾರತ ನಡುವೆ 36 ವಿಮಾನಗಳನ್ನು ನಿರ್ವಹಿಸಲಿದೆ. ಇಂದು ರಾತ್ರಿ 8 ಗಂಟೆಯಿಂದ ಏರ್ ಇಂಡಿಯಾ ವೆಬ್ಸೈಟ್ ಮೂಲಕ ಟಿಕೆಟ್ ಕಾಯ್ದಿರಿಸಬಹುದು ಎಂದು ಏರ್ ಇಂಡಿಯಾ ಹೇಳಿಕೆಯಲ್ಲಿ ತಿಳಿಸಿದೆ.
ವಂದೇ ಭಾರತ್ ಮಿಷನ್ನ ನಾಲ್ಕನೇ ಹಂತದ ಅಡಿಯಲ್ಲಿ ಭಾರತವನ್ನು ಕೆನಡಾ, ಯುಎಸ್, ಯುಕೆ, ಕೀನ್ಯಾ, ಶ್ರೀಲಂಕಾ, ಫಿಲಿಪೈನ್ಸ್, ಕಿರ್ಗಿಸ್ತಾನ್, ಸೌದಿ ಅರೇಬಿಯಾ, ಬಾಂಗ್ಲಾದೇಶ, ಥೈಲ್ಯಾಂಡ್, ದಕ್ಷಿಣ ಆಫ್ರಿಕಾ, ರಷ್ಯಾ, ಆಸ್ಟ್ರೇಲಿಯಾ, ಮ್ಯಾನ್ಮಾರ್, ಜಪಾನ್, ಉಕ್ರೇನ್ ಮತ್ತು ವಿಯೆಟ್ನಾಂಗೆ ಸಂಪರ್ಕಿಸುವ 170 ವಿಮಾನಗಳನ್ನು ಏರ್ ಇಂಡಿಯಾ ನಿರ್ವಹಿಸಲಿದೆ.
ದೇಶಾದ್ಯಂತ ಕೊರೋನವೈರಸ್ ಪ್ರೇರಿತ ಲಾಕ್ಡೌನ್ನಿಂದಾಗಿ ಎರಡು ತಿಂಗಳ ಬಳಿಕ ಭಾರತವು ಮೇ 25, 2020 ರಿಂದ ದೇಶೀಯ ಪ್ರಯಾಣಿಕರ ಹಾರಾಟದ ಕಾರ್ಯಾಚರಣೆಯನ್ನು ಪುನರಾರಂಭಿಸಿತ್ತು. ಆದರೆ ಪ್ರಸ್ತುತ ಅಂತರರಾಷ್ಟ್ರೀಯ ವಿಮಾನ ಪ್ರಯಾಣವನ್ನು ಸ್ಥಗಿತಗೊಳಿಸಲಾಗಿದೆ.
ಭಾರತದ ವಾಯುಯಾನ ನಿಯಂತ್ರಕ ಡೈರೆಕ್ಟರೇಟ್ ಜನರಲ್ ಆಫ್ ಸಿವಿಲ್ ಏವಿಯೇಷನ್ (ಡಿಜಿಸಿಎ) ಅಂತರರಾಷ್ಟ್ರೀಯ ವಿಮಾನಯಾನವನ್ನು ಜುಲೈ 31 ರವರೆಗೆ ಸ್ಥಗಿತಗೊಳಿಸಲಾಗುವುದು ಎಂದು ಪ್ರಕಟಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.