ನವದೆಹಲಿ: ದೇಶದಲ್ಲಿ ಈವರೆಗೆ ಒಟ್ಟು 4, 24, 433 ಜನರು ಕೋವಿಡ್-19ನಿಂದ ಚೇತರಿಸಿಕೊಂಡಿದ್ದಾರೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಕಳೆದ 24 ಗಂಟೆಗಳಲ್ಲಿ, 15,350 ಜನರು ಕೋವಿಡ್-19 ನಿಂದ ಚೇತರಿಸಿಕೊಂಡಿದ್ದಾರೆ ಮತ್ತು ಇದರೊಂದಿಗೆ ಚೇತರಿಕೆಯ ಪ್ರಮಾಣವು ಶೇಕಡಾ 60.85 ಕ್ಕೆ ತಲುಪಿದೆ ಎಂದು ವರದಿಗಳು ತಿಳಿಸಿವೆ.
ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಒಟ್ಟು 24, 248 ಹೊಸ ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ. ಒಟ್ಟು ಪ್ರಕರಣಗಳನ್ನು 6,97,413 ಕ್ಕೆ ತಲುಪಿದೆ. ಒಂದೇ ದಿನದಲ್ಲಿ 425 ಸಾವುಗಳು ರಾಷ್ಟ್ರವ್ಯಾಪಿ ಸಂಭವಿಸಿದೆ. ಇದರಿಂದ ಒಟ್ಟು ಸಾವಿನ ಸಂಖ್ಯೆ 19,693ಕ್ಕೆ ತಲುಪಿದೆ ಎಂದು ವರದಿಯಾಗಿದೆ. ಪ್ರಸ್ತುತ, ದೇಶದಲ್ಲಿ ಸಕ್ರಿಯ ಕೊರೋನಾ ಪ್ರಕರಣಗಳ ಸಂಖ್ಯೆ 2, 53, 287 ಆಗಿದೆ.
ಈ ನಡುವೆ, ಕಳೆದ 24 ಗಂಟೆಗಳಲ್ಲಿ ದೇಶದ ವಿವಿಧ ಪ್ರಯೋಗಾಲಯಗಳು ಒಟ್ಟು 1,80,596 ಪರೀಕ್ಷೆಗಳನ್ನು ಕೊರೋನಾ ವೈರಸ್ಗಾಗಿ ನಡೆಸಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಐಸಿಎಂಆರ್ ತಿಳಿಸಿದೆ. ಈವರೆಗೆ 99,69,662 ಪರೀಕ್ಷೆಗಳನ್ನು ನಡೆಸಲಾಗಿದೆ.
ಸರ್ಕಾರಿ ಮತ್ತು ಖಾಸಗಿ ಪ್ರಯೋಗಾಲಯಗಳಿಗೆ ಅನುಮೋದನೆ ನೀಡುವ ಮೂಲಕ ಐಸಿಎಂಆರ್ ಕೋವಿಡ್ -19 ಗಾಗಿ ತನ್ನ ಪರೀಕ್ಷಾ ಸೌಲಭ್ಯಗಳನ್ನು ನಿರಂತರವಾಗಿ ಹೆಚ್ಚಿಸುತ್ತಿದೆ. ಈಗಿನಂತೆ, 788 ಸರ್ಕಾರಿ ಪ್ರಯೋಗಾಲಯಗಳು ಮತ್ತು 317 ಖಾಸಗಿ ಪ್ರಯೋಗಾಲಯಗಳು ಭಾರತದಾದ್ಯಂತ ಕಾರ್ಯಾಚರಿಸುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.