ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಜುಲೈ 10ರಂದು ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ತಲೆಯೆತ್ತಿರುವ ಏಷ್ಯಾದ ಅತಿದೊಡ್ಡ ಸೌರ ವಿದ್ಯುತ್ ಸ್ಥಾವರವನ್ನು ರಾಷ್ಟ್ರಕ್ಕೆ ಅರ್ಪಣೆ ಮಾಡಲಿದ್ದಾರೆ ಎಂದು ವರದಿಗಳು ತಿಳಿಸಿವೆ.
750 ಮೆಗಾವ್ಯಾಟ್ ಅಲ್ಟ್ರಾ ಮೆಗಾ ಸೌರ ವಿದ್ಯುತ್ ಸ್ಥಾವರವನ್ನು ವಿಡಿಯೋ ಕಾನ್ಫರೆನ್ಸಿಂಗ್ ಮಾಧ್ಯಮದ ಮೂಲಕ ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಮಾಹಿತಿ ನೀಡಿದ್ದಾರೆ.
ಚೌಹಾನ್ ಅವರು ಕೇಂದ್ರ ವಿದ್ಯುತ್ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಆರ್.ಕೆ.ಸಿಂಗ್ ಅವರಿಗೆ ಬೃಹತ್ ವಿದ್ಯುತ್ ಸ್ಥಾವರ ಉದ್ಘಾಟನೆಗೆ ಹಾಜರಾಗುವಂತೆ ಆಹ್ವಾನಿಸಿದ್ದಾರೆ. ಇದಕ್ಕಾಗಿ ಸಿಎಂ ಚೌಹಾನ್ ಅವರು ಸಿಂಗ್ ಅವರನ್ನು ದೆಹಲಿಯ ನಿವಾಸದಲ್ಲಿ ಖುದ್ದು ಭೇಟಿ ಮಾಡಿದರು.
ಭಾರತ ತನ್ನ ಸ್ವಾತಂತ್ರ್ಯದ 75 ವರ್ಷಗಳನ್ನು ಪೂರ್ಣಗೊಳಿಸುವ 2022ರ ವೇಳೆಗೆ 100 ಜಿವ್ಯಾಟ್ ಸೌರ ವಿದ್ಯುತ್ ಉತ್ಪಾದನಾ ಸಾಮರ್ಥ್ಯವನ್ನು ಸ್ಥಾಪಿಸುವ ರಾಷ್ಟ್ರೀಯ ಗುರಿಯನ್ನು ಪಿಎಂ ಮೋದಿ ನಿಗದಿಪಡಿಸಿದ್ದಾರೆ ಎಂಬುದು ಗಮನಾರ್ಹ.
ರೇವಾದಲ್ಲಿನ ಅಲ್ಟ್ರಾ ಮೆಗಾ ಸೌರ ಸ್ಥಾವರ ಉದ್ಘಾಟನೆಯು ಭಾರತವು ಪರಿಸರ ಸ್ನೇಹಿ ಮತ್ತು ನವೀಕರಿಸಬಹುದಾದ ಇಂಧನ ಮೂಲಗಳ ಮೇಲೆ ಹೆಚ್ಚಿನ ಅವಲಂಬನೆಯನ್ನು ಹೊಂದುವ ಹಾದಿಯಲ್ಲಿ ಸಾಗುತ್ತಿರುವುದರಿಂದ ಆ ದಿಕ್ಕಿನಲ್ಲಿನ ಪ್ರಗತಿಯನ್ನು ಹೆಚ್ಚಿಸಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.