ಬೆಂಗಳೂರು: ಕೊರೋನಾ ಬಿಕ್ಕಟ್ಟಿನಿಂದಾಗಿ ರಾಜ್ಯ ತತ್ತರಿಸಿದೆ. ನಿಯಂತ್ರಣ ನಿಯಮಗಳ ಕಟ್ಟುನಿಟ್ಟಿನ ಪಾಲನೆಯ ನಡುವೆಯೂ ಕೊರೋನಾ ಮಾತ್ರ ಹೆಚ್ಚಾಗುತ್ತಲೇ ಇದೆ. ಇಂತಹ ಸಂದರ್ಭದಲ್ಲಿ ಕ್ವಾರಂಟೈನ್ ವಿಚಾರದಲ್ಲಿ ಸರ್ಕಾರ ಮತ್ತೊಂದು ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಸಾಂಸ್ಥಿಕ ಕ್ವಾರಂಟೈನ್ ರದ್ದುಗೊಳಿಸಿ, ಮುಂದಿನ ದಿನಗಳಲ್ಲಿ ಕಡ್ಡಾಯ ಹೋಂ ಕ್ವಾರಂಟೈನ್ ಪದ್ಧತಿಯನ್ನು ಅನುಸರಿಸುವಂತೆ ಸೂಚಿಸಿದೆ.
ಹೊರ ರಾಜ್ಯ ಮತ್ತು ಹೊರ ದೇಶದಿಂದ ರಾಜ್ಯದೊಳಕ್ಕೆ ಆಗಮಿಸುವವರು ಕಡ್ಡಾಯವಾಗಿ 14 ದಿನಗಳ ಹೋಂ ಕ್ವಾರಂಟೈನ್ ಕ್ರಮವನ್ನು ಅನುಸರಣೆ ಮಾಡುವಂತೆ ಈ ಆದೇಶದಲ್ಲಿ ರಾಜ್ಯ ಸರ್ಕಾರ ಸೂಚಿಸಿದೆ. ಈ ಹಿಂದೆ ಹೊರ ರಾಜ್ಯ ಮತ್ತು ಹೊರದೇಶಗಳಿಂದ ರಾಜ್ಯದೊಳಕ್ಕೆ ಬರುವವರಿಗೆ 7 ದಿನಗಳ ಸಾಂಸ್ಥಿಕ ಕ್ವಾರಂಟೈನ್ ಮತ್ತು 7 ದಿನಗಳ ಹೋಂ ಕ್ವಾರಂಟೈನ್ ಕ್ರಮವನ್ನು ಅನುಸರಿಸುವ ಪದ್ಧತಿಯನ್ನು ರಾಜ್ಯ ಸರ್ಕಾರ ಸೂಚಿಸಿತ್ತು. ಆದರೆ ಇದೀಗ ಮತ್ತೆ ತನ್ನ ಆದೇಶವನ್ನು ತಿದ್ದುಪಡಿ ಮಾಡಿದ್ದು, 14 ದಿನಗಳ ಹೋಂ ಕ್ವಾರಂಟೈನ್ ಪದ್ಧತಿ ಅನುಸರಿಸುವಂತೆ ತಿಳಿಸಿದೆ.
ರಾಜ್ಯದಲ್ಲಿ ಕೊರೋನಾ ಸೋಂಕಿತರು ದಿನೇ ದಿನೇ ಹೆಚ್ಚಾಗುತ್ತಿದ್ದಾರೆ. ಆದ್ದರಿಂದ ಸರ್ಕಾರದ ಎಲ್ಲಾ ನಿಯಂತ್ರಣ ನಿಯಮಗಳನ್ನು, ಕ್ವಾರಂಟೈನ್ ನಿಯಮಗಳನ್ನು ಜನರು ತಿಳಿದುಕೊಂಡಿರುವಂತೆಯೂ ರಾಜ್ಯ ಸರ್ಕಾರ ಮಾಹಿತಿ ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.