ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಗುಸ್ಸೊ ಗ್ರಾಮದಲ್ಲಿ ಮಂಗಳವಾರ ಬೆಳಿಗ್ಗೆ ಭದ್ರತಾ ಪಡೆ ಮತ್ತು ಭಯೋತ್ಪಾದಕರ ನಡುವೆ ನಡೆದ ಘರ್ಷಣೆಯಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದಾರೆ ಮತ್ತು ಓರ್ವ ಭಯೋತ್ಪಾದಕ ಸತ್ತಿದ್ದಾನೆ ಎಂದು ವರದಿಗಳು ತಿಳಿಸಿವೆ.
53 ಆರ್ಆರ್ ಮತ್ತು ಸಿಆರ್ಪಿಎಫ್ ಜಂಟಿ ತಂಡವು ಗುಸ್ಸೊ ಪ್ರದೇಶದಲ್ಲಿ ಕೆಲವು ಭಯೋತ್ಪಾದಕರು ಇರುವ ಬಗ್ಗೆ ಸುಳಿವು ಪಡೆದ ನಂತರ ಆ ಪ್ರದೇಶವನ್ನು ಸುತ್ತುವರಿದರು ಮತ್ತು ಶೋಧ ನಡೆಸಿದರು. ಜಂಟಿ ತಂಡವು ಶಂಕಿತ ಸ್ಥಳವನ್ನು ಸುತ್ತುವರಿದಾಗ, ಅಡಗಿರುವ ಭಯೋತ್ಪಾದಕರು ಭದ್ರತಾ ಪಡೆಗಳ ಮೇಲೆ ಗುಂಡು ಹಾರಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ವೇಳೆ ಭದ್ರತಾ ಪಡೆಗಳು ಪ್ರತೀಕಾರ ತೀರಿಸಿಕೊಂಡಿದ್ದು, ಇದು ಎನ್ಕೌಂಟರ್ಗೆ ಕಾರಣವಾಯಿತು. ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಅಧಿಕಾರಿ ಪ್ರಕಾರ, ಭಯೋತ್ಪಾದಕರನ್ನು ಮೊದಲು ಶರಣಾಗುವಂತೆ ಕೇಳಲಾಯಿತು ಆದರೆ ಅವರು ಭದ್ರತಾ ಪಡೆಗಳ ಮೇಲೆ ಗುಂಡು ಹಾರಿಸಿದರು. ಇದಕ್ಕೆ ಪ್ರತಿಯಾಗಿ ಯೋಧರು ಗುಂಡು ಹಾರಿಸಿದ್ದಾರೆ.
ಎರಡು ಮೂರು ಭಯೋತ್ಪಾದಕರು ಈ ಪ್ರದೇಶದಲ್ಲಿ ಅಡಗಿದ್ದಾರೆ ಎಂದು ನಂಬಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಗುಂಡಿನ ದಾಳಿಯಲ್ಲಿ ಒಬ್ಬ ಸೇನಾ ಯೋಧ ಮತ್ತು ಒಬ್ಬ ಪೋಲೀಸ್ ಗಾಯಗೊಂಡಿದ್ದಾರೆ. ಕಾರ್ಯಾಚರಣೆ ಇನ್ನೂ ನಡೆಯುತ್ತಲೇ ಇದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.