ಬೆಂಗಳೂರು: ರಾಜ್ಯದಲ್ಲಿ ಕೊರೋನಾ ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಮ್ಮ ನಿವಾಸದಲ್ಲಿ ಉಪಮುಖ್ಯಮಂತ್ರಿಗಳು, ಸಚಿವರು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಕೊರೋನಾ ಕೇರ್ ಸೆಂಟರ್ಗಳ ನಿರ್ವಹಣೆಗೆ ಕುರಿತಂತೆ ಮಾತುಕತೆ ನಡೆಸಿದರು. ಕಂಟೈನ್ಮೆಂಟ್ ವಲಯಗಳಲ್ಲಿ ಕಟ್ಟುನಿಟ್ಟಿನ ಕ್ರಮಗಳ ಪಾಲನೆ, ಕೊರೋನಾ ಸೋಂಕಿತರಿಗೆ ಪರಿಣಾಮಕಾರಿ ಚಿಕಿತ್ಸೆ ನೀಡುವುದಕ್ಕೆ ಬೇಕಾದ ಅಗತ್ಯ ಕ್ರಮಗಳನ್ನು ಕೈಗೊಳ್ಳುವುದರ ಕುರಿತಾಗಿಯೂ ಸಲಹೆ ಸೂಚನೆಗಳನ್ನು ನೀಡಲಾಯಿತು. ಇದರ ಜೊತೆಗೆ ಕೊರೋನಾಗೆ ಸಂಬಂಧಿಸಿದಂತಹ ಅನೇಕ ವಿಚಾರಗಳ ಬಗ್ಗೆಯೂ ಸಲಹೆ ಸೂಚನೆಗಳನ್ನು ನೀಡಲಾಗಿದೆ ಎಂದು ಸಿಎಂ ಮಾಹಿತಿ ನೀಡಿದ್ದಾರೆ.
ಬೆಂಗಳೂರು ನಗರದಲ್ಲಿ ಕೊರೋನಾ ಸೋಂಕಿತರಿಗೆ ಸರಿಯಾಗಿ ಚಿಕಿತ್ಸೆ ಸಿಗುತ್ತಿಲ್ಲ, ಅಧಿಕಾರಿಗಳು ಜವಾಬ್ದಾರಿ ಯುತವಾಗಿ ಕೆಲಸ ಮಾಡುತ್ತಿಲ್ಲ ಎಂಬ ಆರೋಪಗಳು ಕೇಳಿ ಬಂದಿವೆ. ಈ ಬಗ್ಗೆಯೂ ಸರಿಯಾಗಿ ಕಾರ್ಯ ನಿರ್ವಹಿಸಲು ಅಧಿಕಾರಿಗಳಿಗೆ, ವೈದ್ಯಕೀಯ ಸಿಬ್ಬಂದಿಗಳಿಗೆ ತಿಳಿಸಲಾಗಿದೆ ಎಂದು ಸಿಎಂ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.