ನವದೆಹಲಿ: ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಯುನೈಟೆಡ್ ಕಿಂಗ್ಡಮ್ (ಯುಕೆ) ನಲ್ಲಿ ಆಯೋಜಿಸಲಾಗುತ್ತಿರುವ ಇಂಡಿಯಾ ಗ್ಲೋಬಲ್ ವೀಕ್ 2020ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ ಎಂದು ವರದಿಗಳು ತಿಳಿಸಿವೆ.
ಭಾರತದ ಜಾಗತೀಕರಣದ ಅತಿದೊಡ್ಡ ಅಂತರರಾಷ್ಟ್ರೀಯ ಕಾರ್ಯಕ್ರಮಗಳಲ್ಲಿ ಇದು ಒಂದಾಗಿದೆ ಎಂದು ಬಣ್ಣಿಸಲಾಗಿದೆ. ಜುಲೈ 9ರಂದು ಕಾರ್ಯಕ್ರಮ ಪ್ರಾರಂಭವಾಗಲಿದ್ದು, ಭಾರತದ ವ್ಯಾಪಾರ, ವಿದೇಶಿ ಹೂಡಿಕೆ ಭವಿಷ್ಯ ಮತ್ತು ಉತ್ಪಾದನಾ ಅವಕಾಶಗಳ ಬಗ್ಗೆ ಇದು ಗಮನ ಹರಿಸಲಿದೆ.
ಕೋವಿಡ್-19 ಸಾಂಕ್ರಾಮಿಕ ರೋಗವನ್ನು ಗಮನದಲ್ಲಿಟ್ಟುಕೊಂಡು ಮೂರು ದಿನಗಳ ಈವೆಂಟ್ ಸಂಪೂರ್ಣವಾಗಿ ವರ್ಚುವಲ್ ಶೈಲಿಯಲ್ಲಿ ನಡೆಯಲಿದೆ. ವಿದೇಶಾಂಗ ವ್ಯವಹಾರಗಳ ಕೇಂದ್ರ ಸಚಿವರಾದ ಎಸ್.ಜೈಶಂಕರ್, ರೈಲ್ವೆ ಮತ್ತು ವಾಣಿಜ್ಯ ಸಚಿವ ಪಿಯೂಷ್ ಗೋಯಲ್, ನಾಗರಿಕ ವಿಮಾನಯಾನ ಮತ್ತು ನಗರ ವ್ಯವಹಾರಗಳ ಹರ್ದೀಪ್ ಸಿಂಗ್ ಪುರಿ, ಮಾಹಿತಿ ತಂತ್ರಜ್ಞಾನ ಮತ್ತು ಎಲೆಕ್ಟ್ರಾನಿಕ್ಸ್ ಸಚಿವ ರವಿಶಂಕರ್ ಪ್ರಸಾದ್ ಮತ್ತು ಕೌಶಲ್ಯ ಅಭಿವೃದ್ಧಿ ಸಚಿವ ಮಹೇಂದ್ರ ನಾಥ್ ಪಾಂಡೆ ಅವರು ಇದರಲ್ಲಿ ಭಾಷಣಕಾರರಾಗಿ ಭಾಗವಹಿಸಲಿದ್ದಾರೆ.
ಒಟ್ಟು 75 ಸೆಷನ್ಗಳು ಇಲ್ಲಿ ನಡೆಯಲಿದ್ದು, ಭೌಗೋಳಿಕ ರಾಜಕೀಯ, ವ್ಯವಹಾರ, ಉದಯೋನ್ಮುಖ ತಂತ್ರಜ್ಞಾನಗಳು, ಬ್ಯಾಂಕಿಂಗ್ ಮತ್ತು ಹಣಕಾಸು, ಫಾರ್ಮಾ, ರಕ್ಷಣೆ ಮತ್ತು ಭದ್ರತೆ, ಕಲೆ ಮತ್ತು ಸಂಸ್ಕೃತಿಯಂತಹ ಹಲವಾರು ವಿಷಯಗಳನ್ನು ಇದು ಒಳಗೊಂಡಿದೆ.
ಇದರೊಂದಿಗೆ ಭಾರತದ ಬಾಂಧವ್ಯಕ್ಕೆ ಸಂಬಂಧಿಸಿದ ದೇಶ-ನಿರ್ದಿಷ್ಟ ಅಧಿವೇಶನಗಳ ಸರಣಿಯೂ ನಡೆಯಲಿದೆ. ಅಂತಹ ರಾಷ್ಟ್ರಗಳು ಯುನೈಟೆಡ್ ಸ್ಟೇಟ್ಸ್ (ಯುಎಸ್), ಆಸ್ಟ್ರೇಲಿಯಾ, ಸಿಂಗಾಪುರ್ ಮತ್ತು ಜಪಾನ್ ಅನ್ನು ಒಳಗೊಂಡಿರುತ್ತವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.