ಬೆಂಗಳೂರು: ಅನೇಕ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ವೈದ್ಯರೊಂದಿಗೆ ಆರೋಗ್ಯ ಸಚಿವ ಮಾತುಕತೆ ನಡೆಸಿದ್ದಾರೆ.
ಇನ್ನೊಂದೇ ತಿಂಗಳಿನಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿರುವ ವೈದ್ಯರನ್ನು ಖಾಯಂಗೊಳಿಸಲು ಪೂರಕ ಕ್ರಮಗಳನ್ನು ಕೈಗೊಳ್ಳುವುದಾಗಿಯೂ ಶ್ರೀರಾಮುಲು ಅವರಿಗೆ ಭರವಸೆ ನೀಡಿದ್ದಾರೆ. ಬಿಜೆಪಿ ಸರ್ಕಾರ ಕೊಟ್ಟ ಭರವಸೆಯನ್ನೂ ಮರೆಯುವುದಿಲ್ಲ ಎಂದೂ ಅವರು ತಿಳಿಸಿದರು. ವೈದ್ಯರ ಬೇಡಿಕೆಗೆ ಸ್ಪಂಧಿಸಿರುವ ಸರ್ಕಾರ ಅವುಗಳನ್ನು ಈಡೇರಿಸುವ ನಿಟ್ಟಿನಲ್ಲಿಯೂ ಕ್ರಮ ಕೈಗೊಳ್ಳುತ್ತದೆ ಎಂದು ರಾಮುಲು ಮಾಹಿತಿ ನೀಡಿದ್ದಾರೆ.
ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ಸುಮಾರು 507 ಮಂದಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುವ ವೈದ್ಯರು ಜನಸೇವೆ ಮಾಡಿದ್ದಾರೆ. ಅವರನ್ನು ಖಾಯಂ ಗೊಳಿಸುವ ಬಗ್ಗೆ ಆದೇಶವನ್ನು ಗುರುವಾರ ಆದೇಶ ಹೊರಡಿಸುವುದಾಗಿಯೂ ಅವರು ತಿಳಿಸಿದ್ದಾರೆ. ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುವ ವೈದ್ಯರನ್ನು ಖಾಯಂ ಮಾಡಬೇಕೆನ್ನುವ ಬೇಡಿಕೆ ಹಲವು ವರ್ಷಗಳಿಂದ ಕೇಳಿ ಬರುತ್ತಿದ್ದು, ಆ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳುವ ಭರವಸೆಯನ್ನೂ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.