ಬೆಂಗಳೂರು: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ನೇತೃತ್ವದಲ್ಲಿ ಶುಕ್ರವಾರ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಆರಂಭಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ, ಗೃಹಸಚಿವ ರಾಜನಾಥ್ ಸಿಂಗ್, ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ಬಿಜೆಪಿ ಹಿರಿಯ ಮುಖಂಡ ಎಲ್.ಕೆ.ಅಡ್ವಾಣಿ, ಯಡಿಯೂರಪ್ಪ, ಅನಂತ್ ಕುಮಾರ್ ಸೇರಿದಂvರಿತರ ಬಿಜೆಪಿ ಶಾಸಕರುಗಳು ಮತ್ತು ಸಚಿವರುಗಳು ಇದರಲ್ಲಿ ಭಾಗವಹಿಸಿದ್ದಾರೆ.
ಎರಡು ದಿನಗಳ ಕಾಲ ನಡೆಯುವ ಈ ಸಭೆಯಲ್ಲಿ ದಕ್ಷಿಣ ಭಾರತದಲ್ಲಿ ಬಿಜೆಪಿಯನ್ನು ಬಲಿಷ್ಠಗೊಳಿಸಲು ಬೇಕಾದ ಕಾರ್ಯತಂತ್ರದ ಬಗ್ಗೆ ಚರ್ಚಿಸಲಾಗುತ್ತದೆ. ಅಲ್ಲದೇ ಭೂಸ್ವಾಧೀನ ಮಸೂದೆಯ ಬಗ್ಗೆ ಅಪಪ್ರಚಾರ ನಡೆಸುತ್ತಿರುವ ವಿರೋಧ ಪಕ್ಷಗಳ ಕಾರ್ಯವನ್ನು ವಿಫಲಗೊಳಿಸುವ ಬಗ್ಗೆಯೂ ಮಾತುಕತೆ ನಡೆಯಲಿದೆ.
ಕಳೆದ ೧೦ ತಿಂಗಳಲ್ಲಿ ನರೇಂದ್ರ ಮೋದಿ ಸರ್ಕಾರ ಕೈಗೊಂಡ ಹತ್ತು ಹಲವು ಯೋಜನೆಗಳ ಬಗ್ಗೆಯೂ ಚರ್ಚೆ ನಡೆಯಲಿದೆ. ಮುಂದೆ ಸರ್ಕಾರ ಕೈಗೊಳ್ಳಬೇಕಾದ ಯೋಜನೆಗಳ ಬಗ್ಗೆಯೂ ರೂಪುರೇಷೆ ಸಿದ್ಧವಾಗಲಿದೆ.
ಎ.೪ಕ್ಕೆ ಸಭೆ ಅಂತ್ಯಗೊಳ್ಳಲಿದೆ. ಕಾರ್ಯಕಾರಿಣಿ ಹಿನ್ನಲೆಯಲ್ಲಿ ಬೆಂಗಳೂರಿನಲ್ಲಿ ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿದೆ ಬಿಜೆಪಿಯ ಒಟ್ಟು 3೦೦ ಸದಸ್ಯರು ಇದರಲ್ಲಿ ಪಾಲ್ಗೊಳ್ಳಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.