ಪಾಟ್ನಾ: ಬಿಹಾರದ ಪಶ್ಚಿಮ ಚಂಪಾರನ್ ಜಿಲ್ಲೆಯ ಬಾಗಾಹಾ ಪ್ರದೇಶದಲ್ಲಿ ಭದ್ರತಾ ಪಡೆಗಳು ನಾಲ್ವರು ನಕ್ಸಲರನ್ನು ಎನ್ಕೌಂಟರ್ ಮಾಡಿ ಹತ್ಯೆ ಮಾಡಿವೆ ಎಂದು ವರದಿಗಳು ತಿಳಿಸಿವೆ.
ಎನ್ಕೌಂಟರ್ನಲ್ಲಿ ನಾಲ್ಕು ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ದೃಢಪಡಿಸಿದ್ದಾರೆ.
ಸಶಸ್ತ್ರ ಸೀಮಾ ಬಲ (ಎಸ್ಎಸ್ಬಿ) ಮತ್ತು ವಿಶೇಷ ಕಾರ್ಯಪಡೆ (ಎಸ್ಟಿಎಫ್) ಜಂಟಿ ತಂಡವು ನಕ್ಸಲರ ವಿರುದ್ಧ ಕಾರ್ಯಾಚರಣೆಯನ್ನು ನಡೆಸಿತ್ತು.
ಈ ಬಗ್ಗೆ ಶುಕ್ರವಾರ ಮಾಹಿತಿಯನ್ನು ನೀಡಿದ ಬಾಹಾಗಾ ಪೊಲೀಸ್ ಅಧಿಕಾರಿಗಳು, “ಬಿಹಾರದ ಪಶ್ಚಿಮ ಚಂಪಾರನ್ ಜಿಲ್ಲೆಯ ಬಾಗಾಹಾ ಪ್ರದೇಶದಲ್ಲಿ ಶಾಸ್ತ್ರ ಸೀಮ ಬಲ್ (ಎಸ್ಎಸ್ಬಿ) ಮತ್ತು ವಿಶೇಷ ಕಾರ್ಯಪಡೆ (ಎಸ್ಟಿಎಫ್) ಜಂಟಿ ತಂಡದೊಂದಿಗೆ ನಡೆದ ಮುಖಾಮುಖಿಯಲ್ಲಿ ನಾಲ್ಕು ನಕ್ಸಲರು ಸಾವನ್ನಪ್ಪಿದ್ದಾರೆ” ಎಂದು ಮಾಹಿತಿ ನೀಡಿದ್ದಾರೆ.
3 ಸ್ವಯಂ-ಲೋಡಿಂಗ್ ರೈಫಲ್ಗಳು ಸೇರಿಂದತೆ ಎನ್ಕೌಂಟರ್ ನಡೆದ ಸ್ಥಳದಿಂದ ಅಪಾರ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಪ್ರಸ್ತುತ ದೇಶದಲ್ಲಿ ಕೆಂಪು ಉಗ್ರರ ವಿರುದ್ಧದ ಕಾರ್ಯಾಚರಣೆ ಅತ್ಯಂತ ಪರಿಣಾಮಕಾರಿ ರೀತಿಯಲ್ಲಿ ನಡೆಯುತ್ತಿದೆ. ಶರಣಾಗತಿ ಬಯಸುವ ನಕ್ಸಲರಿಗೆ ಉತ್ತಮ ಜೀವನೋಪಾಯವನ್ನೂ ನೀಡಲಾಗುತ್ತಿದೆ. ಹಿಂಸೆ ಮಾರ್ಗದಲ್ಲೇ ಮುಂದುವರೆಯುತ್ತಿರುವವರನ್ನು ಶಿಕ್ಷಿಸಲಾಗುತ್ತಿದೆ. ಈಗಾಗಲೇ ಅಪಾರ ಪ್ರಮಾಣದ ನಕ್ಸಲರು ಶರಣಾಗತಿ ಪಡೆದುಕೊಂಡಿದ್ದಾರೆ, ಅನೇಕ ಮಂದಿ ಜೀವ ಕಳೆದುಕೊಂಡಿದ್ದಾರೆ. ಒಟ್ಟಿನಲ್ಲಿ ದೇಶದಲ್ಲಿ ಕೆಂಪು ನಕ್ಸಲರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಕುಗ್ಗುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.