ನವದೆಹಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಶುಕ್ರವಾರ ಸಂಜೆ ಯುಎಸ್ ರಕ್ಷಣಾ ಕಾರ್ಯದರ್ಶಿ ಮಾರ್ಕ್ ಟಿ ಎಸ್ಪರ್ ಅವರೊಂದಿಗೆ ದೂರವಾಣಿ ಸಂವಾದ ನಡೆಸಿದರು ಮತ್ತು ದ್ವಿಪಕ್ಷೀಯ ರಕ್ಷಣಾ ಸಹಕಾರಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚಿಸಿದರು ಎಂದು ರಕ್ಷಣಾ ಮೂಲಗಳು ತಿಳಿಸಿವೆ. ಯುಎಸ್ ರಕ್ಷಣಾ ಕಾರ್ಯದರ್ಶಿಯ ಕೋರಿಕೆಯ ಮೇರೆಗೆ ಈ ಸಂವಹನ ನಡೆದಿದೆ.
ವರದಿಗಳ ಪ್ರಕಾರ, ಇಬ್ಬರು ಮಂತ್ರಿಗಳು ಪರಸ್ಪರ ನಿಯಮಿತವಾಗಿ ಸಂಪರ್ಕದಲ್ಲಿದ್ದಾರೆ. ಇತ್ತೀಚಿನ ಸಭೆಗಳಲ್ಲಿ, ಅವರು ದ್ವಿಪಕ್ಷೀಯ ರಕ್ಷಣಾ ಸಹಕಾರ ಮತ್ತು ಪರಸ್ಪರ ಆಸಕ್ತಿಯ ವಿಷಯಗಳ ಕುರಿತು ಹಲವಾರು ಬಾರಿ ಮಾತನಾಡಿದ್ದಾರೆ. ನಿನ್ನೆಯ ಸಂಭಾಷಣೆಯು ಈ ವಿನಿಮಯದ ಮುಂದುವರಿಕೆಯಾಗಿದೆ ಎಂದು ಮೂಲಗಳು ತಿಳಿಸಿವೆ.
ಇದಕ್ಕೂ ಮುನ್ನ ಮಂಗಳವಾರ, ಭಾರತ ಮತ್ತು ಯುಎಸ್ ರಾಷ್ಟ್ರಗಳು ಮುಕ್ತ, ಅಂತರ್ಗತ, ಶಾಂತಿಯುತ ಮತ್ತು ಸಮೃದ್ಧ ಇಂಡೋ-ಪೆಸಿಫಿಕ್ ಅನ್ನು ಖಾತರಿಪಡಿಸುವ ನಿಟ್ಟಿನಲ್ಲಿ ಕೆಲಸ ಮಾಡುವ ಬದ್ಧತೆಯನ್ನು ಪುನರುಚ್ಛರಿಸಿವೆ. ವಿಶ್ವಸಂಸ್ಥೆಯಲ್ಲಿ, ವಿಶೇಷವಾಗಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸದಸ್ಯತ್ವದ ಸಮಯದಲ್ಲಿ ಸಹಕಾರವನ್ನು ಗಾಢವಾಗಿಸುವ ಅಗತ್ಯತೆಯ ಬಗ್ಗೆ ಉಭಯ ದೇಶಗಳು ಪರಸ್ಪರ ಸಮ್ಮತಿ ಸೂಚಿಸಿವೆ.
ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶ್ರೀಂಗ್ಲಾ ಮತ್ತು ಯು.ಎಸ್.ರಾಜಕೀಯ ವ್ಯವಹಾರಗಳ ರಾಜ್ಯ ಕಾರ್ಯದರ್ಶಿ ಡೇವಿಡ್ ಹೇಲ್ ಅವರು ಉಭಯ ದೇಶಗಳ ನಡುವಿನ ವರ್ಚುವಲ್ ಸಮಾಲೋಚನೆಯ ಸಂದರ್ಭದಲ್ಲಿ, ಮಂಗಳವಾರ ಹಂಚಿಕೆಯ ಹಿತಾಸಕ್ತಿಗಳ ಹಲವಾರು ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.