ನವದೆಹಲಿ: ದೇಶದಲ್ಲಿ ದಿನವೊಂದಕ್ಕೆ ನೂರಾರು ಅಪಘಾತಗಳು ನಡೆಯುತ್ತವೆ. ಇದನ್ನು ತಡೆಯುವ ನಿಟ್ಟಿನಲ್ಲಿ ಸರ್ಕಾರ ಶೀಘ್ರದಲ್ಲಿ ಸಾರಿಗೆ ಮತ್ತು ಸುರಕ್ಷತಾ ಮಸೂದೆಯನ್ನು ಜಾರಿಗೊಳಿಸಲು ಮುಂದಾಗಿದೆ. ಅಲ್ಲದೇ ಅಪಘಾತ ಸಂತ್ರಸ್ಥರಿಗಾಗಿ ನಗದು ರಹಿತ ಚಿಕಿತ್ಸೆಯನ್ನು ನೀಡುವ ಯೋಜನೆಯನ್ನು ಜಾರಿಗೆ ತರಲು ಮುಂದಾಗಿದೆ.
ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಈ ಬಗ್ಗೆ ಹೇಳಿಕೊಂಡಿದ್ದಾರೆ. ಭಾರತದಲ್ಲಿ ಪ್ರತಿ ಸೆಕೆಂಡುಗಳಿಗೊಂದು ಅಪಘಾತ ನಡೆಯುತ್ತದೆ, ಇದರಿಂದಾಗಿ ಪ್ರತಿ ನಾಲ್ಕು ನಿಮಿಷಗಳಿಗೊಂದು ಸಾವು ಸಂಭವಿಸುತ್ತದೆ. ಇದರಲ್ಲಿ 15-25 ವರ್ಷ ವಯೋಮಿತಿಯವರೇ ಹೆಚ್ಚು ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.
ಇದನ್ನು ತಲೆಯಲ್ಲಿಟ್ಟುಕೊಂಡು ಸಾರಿಗೆ ಮತ್ತು ಸುರಕ್ಷತಾ ಕಾಯಿದೆಯನ್ನು ಜಾರಿಗೆ ತರುತ್ತಿದ್ದೇವೆ. ಅಲ್ಲದೇ ನಗದು ರಹಿತ ಚಿಕಿತ್ಸಾ ಯೋಜನೆ ಜಾರಿಗೊಳಿಸುತ್ತೇವೆ. ಈ ಯೋಜನೆಯನ್ವಯ ಅಪಘಾತಕ್ಕೊಳಗಾದ ವ್ಯಕ್ತಿ ಮೊದಲ 50 ಗಂಟೆಗಳ ಕಾಲ ಚಿಕಿತ್ಸೆಗೆ ಹಣವನ್ನು ನೀಡಬೇಕಾಗಿಲ್ಲ ಎಂದರು.
ಸಾರಿಗೆ ಸುರಕ್ಷತೆ ಬಗ್ಗೆ ಮನ್ ಕೀ ಬಾತ್ನಲ್ಲಿ ಅರಿವು ಮೂಡಿಸುವಂತೆ ಹಲವಾರು ಮಂದಿ ತನ್ನನ್ನು ಒತ್ತಾಯಪಡಿಸಿದ್ದರು ಎಂಬುದಾಗಿ ಅವರು ತಿಳಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.