ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತ್ನಾಗ್ ಜಿಲ್ಲೆಯ ಪಹಲ್ಗಮ್ನ ಶ್ರೀಗುಫ್ವಾರ ಪ್ರದೇಶದಲ್ಲಿ ಸೋಮವಾರ ಬೆಳಿಗ್ಗೆ ನಡೆದ ಎನ್ಕೌಂಟರ್ನಲ್ಲಿ ಓರ್ವ ಅಪರಿಚಿತ ಭಯೋತ್ಪಾದಕನನ್ನು ಸಂಹಾರ ಮಾಡಲಾಗಿದೆ. ಕಾರ್ಯಾಚರಣೆ ಇನ್ನೂ ಮುಂದುವರೆದಿದೆ ಎಂದು ಭದ್ರತಾ ಅಧಿಕಾರಿಗಳು ತಿಳಿಸಿದ್ದಾರೆ.
ಅನಂತ್ನಾಗ್ ಪೊಲೀಸ್, 3 ಆರ್ಆರ್ ಮತ್ತು ಸಿಆರ್ಪಿಎಫ್ ಜಂಟಿ ತಂಡವು ಈ ಪ್ರದೇಶದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ನಿರ್ದಿಷ್ಟ ಮಾಹಿತಿಯ ಮೇಲೆ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ ಎಂದು ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಜಂಟಿ ಶೋಧನಾ ತಂಡವು ಶಂಕಿತ ಸ್ಥಳವನ್ನು ಸುತ್ತುವರೆದಿದ್ದರಿಂದ, ಅಡಗಿದ್ದ ಭಯೋತ್ಪಾದಕರು ಅವರ ಮೇಲೆ ಗುಂಡು ಹಾರಿಸಿದರು, ಹೀಗಾಗಿ ಭದ್ರತಾ ಪಡೆಗಳು ಪ್ರತೀಕಾರ ತೀರಿಸಿದರು. ಇದರಿಂದ ಎನ್ಕೌಂಟರ್ ಆರಂಭಗೊಂಡಿತು. ಎರಡು ಮೂರು ಭಯೋತ್ಪಾದಕರು ಈ ಪ್ರದೇಶದಲ್ಲಿ ಅವಿತುಕೊಂಡಿದ್ದಾರೆ ಎಂದು ನಂಬಲಾಗಿದೆ ಎಂದು ಮೂಲಗಳು ತಿಳಿಸಿವೆ.
ಭಾನುವಾರ, ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೊಪೋರ್ ಪಟ್ಟಣದಲ್ಲಿ ನಡೆದ ಎನ್ಕೌಂಟರ್ನಲ್ಲಿ ಮೂವರು ಭಯೋತ್ಪಾದಕರನ್ನು ಭದ್ರತಾ ಪಡೆಗಳು ವಧೆ ಮಾಡಿದೆ. ಹತ್ಯೆಗೀಡಾದ ಭಯೋತ್ಪಾದಕರಲ್ಲಿ ಒಬ್ಬನನ್ನು ಲಷ್ಕರ್-ಎ-ತೋಯ್ಬಾ ಜೊತೆ ಸಂಪರ್ಕ ಹೊಂದಿದ ಉಸ್ಮಾನ್ ಎಂದು ಗುರುತಿಸಲಾಗಿದೆ. ಇತ್ತೀಚೆಗೆ ಸೊಪೋರ್ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಸಿಆರ್ಪಿಎಫ್ ಜಯೋಧ ಹುತಾತ್ಮರಾಗಿದ್ದರು ಮತ್ತು ನಾಗರಿಕ ಹತರಾಗಿದ್ದರು ಎಂದು ಮೂಲಗಳು ತಿಳಿಸಿವೆ. ಸೊಪೋರ್ ಎನ್ಕೌಂಟರ್ನಲ್ಲಿ ಮೂವರು ಭಯೋತ್ಪಾದಕರನ್ನು ನಿರ್ಮೂಲನೆ ಮಾಡಿದ್ದು ಪೊಲೀಸ್ ಮತ್ತು ಭದ್ರತಾ ಪಡೆಗಳಿಗೆ ದೊಡ್ಡ ಯಶಸ್ಸು ಎಂದು ಕಾಶ್ಮೀರ ಐಜಿಪಿ ಅಭಿಪ್ರಾಯಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರ ಪೊಲೀಸರ ಜಂಟಿ ತಂಡ, 22 ಆರ್ಆರ್, ಮತ್ತು ಸಿಆರ್ಪಿಎಫ್ ಭಾನುವಾರ ಮುಂಜಾನೆ 4 ಗಂಟೆಗೆ ಸೋಪೋರ್ನ ರೆಬನ್ ಪ್ರದೇಶದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ಸುಳಿವು ಸಿಕ್ಕ ನಂತರ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.