ನವದೆಹಲಿ: ಕಳೆದ 24 ಗಂಟೆಗಳಲ್ಲಿ ಕೊರೋನವೈರಸ್ಗಾಗಿ ಒಟ್ಟು 2,19,103 ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಸೋಮವಾರ ತಿಳಿಸಿದೆ.
ಇದರೊಂದಿಗೆ ಭಾರತದಲ್ಲಿ ಒಟ್ಟು ಪರೀಕ್ಷೆಗಳ ಸಂಖ್ಯೆ 1,18,06,265 ತಲುಪಿದೆ.
ಈ ನಡುವೆ, ಐಸಿಎಂಆರ್ ಸರ್ಕಾರಿ ಮತ್ತು ಖಾಸಗಿ ಪ್ರಯೋಗಾಲಯಗಳಿಗೆ ಅನುಮೋದನೆ ನೀಡುವ ಮೂಲಕ ಕೋವಿಡ್ -19 ಗಾಗಿ ತನ್ನ ಪರೀಕ್ಷಾ ಸೌಲಭ್ಯಗಳನ್ನು ನಿರಂತರವಾಗಿ ಹೆಚ್ಚಿಸುತ್ತಿದೆ.
ಈಗಿನಂತೆ, ಭಾರತದಾದ್ಯಂತ ಒಟ್ಟು 688 ಪ್ರಯೋಗಾಲಯಗಳಿಗೆ ಅನುಮೋದನೆಯನ್ನು ನೀಡಿದೆ. ಇದರಲ್ಲಿ 480 ಸರ್ಕಾರಿ ಪ್ರಯೋಗಾಲಯಗಳು ಮತ್ತು 208 ಖಾಸಗಿ ಪ್ರಯೋಗಾಲಯಗಳು ಆಗಿವೆ.
ಕಳೆದ 25 ಗಂಟೆಗಳಲ್ಲಿ 28701 ಹೊಸ ಕೋವಿಡ್ -19 ಪ್ರಕರಣಗಳನ್ನು ದಾಖಲಾಗಿದ್ದು, ಒಟ್ಟು ಪ್ರಕರಣಗಳು 8.78 ಲಕ್ಷ ದಾಟಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಮಾಹಿತಿಯ ಪ್ರಕಾರ 8,78,254ರಷ್ಟಾಗಿದೆ, ಅದರಲ್ಲಿ 3,01,609 ಸಕ್ರಿಯವಾಗಿವೆ, 5,53,471 ಗುಣಮುಖರಾಗಿದ್ದಾರೆ ಮತ್ತು ಸೋಂಕಿನಿಂದಾಗಿ ಇದುವರೆಗೆ 23,174 ಮಂದಿ ಸಾವನ್ನಪ್ಪಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.