ಬಂಡಿಪೋರಾ: ಜಮ್ಮು ಮತ್ತು ಕಾಶ್ಮೀರದಲ್ಲಿ ನಾಲ್ವರು ಭಯೋತ್ಪಾದಕರನ್ನು ಬಂಧನಕ್ಕೆ ಒಳಪಡಿಸಲಾಗಿದೆ. ಬಂಡಿಪೋರಾದ ಹಾಜಿನ್ನ ಚಂದರ್ಗೀರ್ ಮತ್ತು ಸಾಧುನಾರಾ ಪ್ರದೇಶಗಳಲ್ಲಿ 4 ಭಯೋತ್ಪಾದಕ ಸಹಚರರನ್ನು ಭದ್ರತಾ ಪಡೆಗಳು ಮತ್ತು ಬಂಡೀಪೋರಾ ಪೊಲೀಸರು ಬಂಧಿಸಿದ್ದಾರೆ ಎಂದು ಕಾಶ್ಮೀರ ವಲಯ ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಬಂಧಿತ ಭಯೋತ್ಪಾದಕರಿಂದ ಎರಡು ಗ್ರೆನೇಡ್ಗಳು, ಎಕೆ ಮ್ಯಾಗಜೀನ್, 25 ಎಕೆ ರೌಂಡ್ಸ್ ಮತ್ತು ಇತರ ಅಕ್ರಮ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್ನಲ್ಲಿ ತಿಳಿಸಿದ್ದಾರೆ.
ನಾಲ್ಕು ಭಯೋತ್ಪಾದಕ ಸಹಚರರನ್ನು ಯಶಸ್ವಿಯಾಗಿ ಬಂಧಿಸಿದ ದಿನವೇ, ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಜಮ್ಮು-ಕಾಶ್ಮೀರ ಸೊಪೋರ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮೂರು ಭಯೋತ್ಪಾದಕರನ್ನು ಸಂಹಾರ ಮಾಡಿವೆ. ಅವರಿಂದಲೂ, ಭಾರೀ ಪ್ರಮಾಣ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಅಕ್ರಮ ವಸ್ತುಗಳು ವಶಪಡಿಸಿಕೊಂಡಿವೆ.
ಕಳೆದ ಕೆಲವು ತಿಂಗಳುಗಳಲ್ಲಿ, ಭಾರತೀಯ ಸೇನೆ, ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಒಳಗೊಂಡ ಭದ್ರತಾ ಪಡೆಗಳು ಭಯೋತ್ಪಾದನಾ-ವಿರೋಧಿ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದು, ಕಣಿವೆಯನ್ನು ಹಿಂಸಾಚಾರ ಮುಕ್ತಗೊಳಿಸಲು ಕ್ರಮ ಕೈಗೊಳ್ಳುತ್ತಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.