ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲೇ ಇದ್ದು, ಈಗಾಗಲೇ ರಾಜ್ಯ ಸರ್ಕಾರ ಹಲವಾರು ನಿಯಂತ್ರಣ ಕ್ರಮಗಳನ್ನು ಕೈಗೊಂಡಿದೆ. ಹೀಗಿದ್ದರೂ ಸೋಂಕು ಹರಡುವ ತೀವ್ರತೆ ಕಡಿಮೆಯಾಗಿಲ್ಲ. ಈಗಾಗಲೇ 1955 ಖಾಸಗಿ ಆಸ್ಪತ್ರೆಗಳಲ್ಲಿ ರೋಗಿಗಳ ಚಿಕಿತ್ಸೆಗೆ ಹಾಸಿಗೆಗಳ ವ್ಯವಸ್ಥೆಯನ್ನೂ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಮಾಹಿತಿ ನೀಡಿದ್ದಾರೆ.
ಅವರು ಕೊರೋನಾ ಸೋಂಕಿನ ಪ್ರಮಾಣ ಹೆಚ್ಚಾಗಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚೆ ನಡೆಸಿದ ಅವರು, ಬಳಿಕ ಈ ವಿಚಾರವನ್ನು ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 38000 ಕ್ಕೂ ಅಧಿಕವಾಗಿದ್ದು, ಇದನ್ನು ಹತೋಟಿಗೆ ತರುವ, ಹರಡದಂತೆ ತಡೆಯುವ ಸಲುವಾಗಿ ಕಾರ್ಯ ನಿರ್ವಹಿಸುವಂತೆಯೂ ಬೇಕಾದ ಪೂರಕ ಕ್ರಮಗಳನ್ನು ಕೈಗೊಳ್ಳುವಂತೆ ಅವರು ಜಿಲ್ಲಾಧಿಕಾರಿಗಳಿಗೆ ತಿಳಿಸಿದ್ದಾರೆ. ಜೊತೆಗೆ ರಾಜ್ಯದ 2774 ಕೊರೋನಾ ಚಿಕಿತ್ಸಾ ಕೇಂದ್ರಗಳಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಜೊತೆಗೆ ರಾಜ್ಯದ 27,718 ಕ್ಕೂ ಅಧಿಕ ಸರ್ಕಾರಿ ಆಸ್ಪತ್ರೆಗಳಲ್ಲಿ ಕೊರೋನಾ ರೋಗಿಗಳಿಗೆ ಚಿಕಿತ್ಸೆ ನೀಡಲು ಹಾಸಿಗೆಗಳ ವ್ಯವಸ್ಥೆಯನ್ನು ಮಾಡಲಾಗಿದೆ. ಅಲ್ಲದೆ ಇನ್ನಿತರ 1955 ಆಸ್ಪತ್ರೆಗಳಲ್ಲಿಯೂ ಸೋಂಕಿತರ ಚಿಕಿತ್ಸೆಗೆ ಹಾಸಿಗೆಗಳನ್ನು ಕಾಯ್ದಿರಿಸಲಾಗಿದೆ ಎಂದೂ ಮುಖ್ಯಮಂತ್ರಿ ತಿಳಿಸಿದ್ದಾರೆ.
ಒಟ್ಟಿನಲ್ಲಿ ಕೊರೋನಾ ಸೋಂಕು ತಡೆಗೆ ಮತ್ತು ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡುವಲ್ಲಿ ಪೂರಕ ಕ್ರಮಗಳನ್ನು ಕೈಗೊಳ್ಳುತ್ತಿದೆ. ಆ ಮೂಲಕ ರಾಜ್ಯದಲ್ಲಿ ಕೋವಿಡ್-19 ನಿಯಂತ್ರಣಕ್ಕೆ ನಿರಂತರ ಪ್ರಯತ್ನಗಳನ್ನು ನಡೆಸುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.