ನವದೆಹಲಿ: ಕೇಂದ್ರ ಕ್ರೀಡಾ ಸಚಿವ ಕಿರೆನ್ ರಿಜ್ಜು ಅವರು ಮಂಗಳವಾರ 17 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಕ್ರೀಡಾ ಮತ್ತು ಯುವ ವ್ಯವಹಾರಗಳ ಸಚಿವರೊಂದಿಗೆ, ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು.
ದೇಶಾದ್ಯಂತದ ತಳಮಟ್ಟದಲ್ಲಿ ಕ್ರೀಡಾ ಅಭಿವೃದ್ಧಿಯ ಬಗ್ಗೆ ಮತ್ತು ನೆಹರೂ ಯುವ ಕೇಂದ್ರ ಸಂಘಟನ್ ಮತ್ತು ರಾಷ್ಟ್ರೀಯ ಸೇವಾ ಯೋಜನೆಯ ಚಟುವಟಿಕೆಗಳ ಬಗ್ಗೆ ಮಾರ್ಗಸೂಚಿಯನ್ನು ರಚಿಸುವ ನಿಟ್ಟಿನಲ್ಲಿ ಸಭೆಯಲ್ಲಿ ಚರ್ಚೆ ನಡೆಸಲಾಯಿತು.
ಈ ಬಗ್ಗೆ ಟ್ವಿಟ್ ಮಾಡಿರುವ ರಿಜ್ಜು,” 17 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಕ್ರೀಡಾ ಸಚಿವರೊಂದಿಗೆ, ಹಿರಿಯ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚೆ ನಡೆಸಿ, ದೇಶದಾದ್ಯಂತದ ಕ್ರೀಡೆ ಮತ್ತು ಯುವಜನ ಸಂಬಂಧಿತ ಚಟುವಟಿಕೆಗಳ ಬಗ್ಗೆ ಸಮಗ್ರ ರೂಪುರೇಷೆ ರಚಿಸಲಾಯಿತು. ಕೋವಿಡ್-19 ಅವಧಿಯಲ್ಲಿ ನಡೆಸಲಾದ ಕಾರ್ಯಗಳ ಪರಿಶೀಲನೆ ನಡೆಸಲಾಯಿತು” ಎಂದಿದ್ದಾರೆ.
ಜುಲೈ14, 15ರಂದು ಎರಡು ದಿನ ಕಿರೆನ್ ರಿಜ್ಜು ಅವರು ಎಲ್ಲಾ ರಾಜ್ಯಗಳ ಕ್ರೀಡಾ ಮಂತ್ರಿಗಳು ಮತ್ತು ಹಿರಿಯ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ.
Youth Affairs and Sports Ministers & senior officials of 17 states and UTs interacted with @KirenRijiju over video conference to plan a collaborative roadmap to further sports and youth related activities across India. The activities undertaken during Covid19 were also reviewed. pic.twitter.com/qnoWzdiOWO
— Kiren Rijiju Office (@RijijuOffice) July 14, 2020
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.